ಉತ್ತರ ಕನ್ನಡ

ಸಹಾಯಕ ಅಭಿಯಂತರ ಮರುನಿಯೋಜಿಸಿ

Published On :

ಹೊನ್ನಾವರ: ಉಪವಿಭಾಗೀಯ ಕಚೇರಿಗೆ ಸಹಾಯಕ ಅಭಿಯಂತರರನ್ನು ಮರು ನಿಯೋಜನೆ ಮಾಡಿ ಸುಗಮ ಆಡಳಿತಕ್ಕೆ ಅವಕಾಶ ಕೊಡಬೇಕೆಂದು ಜಿಪಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಸಂಬಂಧಪಟ್ಟ ಶಾಸಕರನ್ನು ಗ್ರಾಪಂ ತಾಲೂಕು ಒಕ್ಕೂಟ ಆಗ್ರಹಿಸಿದೆ. ತಾಲೂಕಿನ ಪಂಚಾಯತ್ ರಾಜ್ ಎಂಜಿನೀಯರಿಂಗ್ ಉಪವಿಭಾಗೀಯ ಕಚೇರಿಯಲ್ಲಿ ಇರಬೇಕಾದ 5 ತಾಂತ್ರಿಕ ಅಭಿಯಂತರ ಹುದ್ದೆಗಳಲ್ಲಿ 4 ಖಾಲಿ ಇದೆ. ಕೋಟ್ಯಂತರ ರು.ಗಳ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆ ಉಂಟಾಗಿದೆ. ಗ್ರಾಪಂಗಳಲ್ಲಿ ಸಾಕಷ್ಟು ಅನುದಾನ ಇದ್ದರೂ ಅವುಗಳ ಅನುಷ್ಠಾನಕ್ಕೆ ಕಿರಿಯ ಮತ್ತು ಸಹಾಯಕ ಅಭಿಯಂತರ ಕೊರತೆಯಿಂದಾಗಿ ತಾಲೂಕಿನಾದ್ಯಂತ ಗ್ರಾಪಂಗಳ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿಯೂ ಸಾಕಷ್ಟು ಹಿನ್ನಡೆ ಉಂಟಾಗಿದೆ.
ಈ ಎಲ್ಲ ಸಮಸ್ಯೆಗಳ ನಡುವೆಯೂ ಹಾಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಅಭಿಯಂತರರಲ್ಲಿ ಇಬ್ಬರನ್ನು ವಿಭಾಗೀಯ ಕಚೇರಿಗೆ ವರ್ಗಾವಣೆ ಮಾಡಿರುವುದು ಸಮಂಜಸವಾದುದಲ್ಲ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಲವಾರು ಕಾಮಗಾರಿಗಳು ಅನುಷ್ಠಾನಗೊಂಡಿದ್ದು, ಸುಮಾರು ರು. 3 ಕೋಟಿಗೂ ಅಧಿಕ ಬಿಲ್ ಗುತ್ತಿಗೆದಾರರಿಗೆ ಪಾವತಿಯಾಗಬೇಕಿದೆ. ಅನೇಕ ಕಾಮಗಾರಿಗಳು ಪೂರ್ಣಗೊಂಡು ಬಿಲ್ ಸಂದಾಯವಾಗಿದ್ದರೂ ಈವರೆಗೂ ಸರ್ಕಾರದಿಂದ ಕ್ರಿಯಾ ಯೋಜನೆಗಳಿಗೆ ಅನುಮೋದನೆ ಪಡೆಯದಿರುವ ಬಗ್ಗೆ ಗುತ್ತಿಗೆದಾರರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಈ ಸಮಸ್ಯೆಗಳಿಗೂ ಸರ್ಕಾರದ ಅನುಮೋದನೆ ಪಡೆಯುವಲ್ಲಿ ಮಧ್ಯ ಪ್ರವೇಶಿಸಬೇಕೆಂದು ಜಿಪಂ ಅನ್ನು ಒಕ್ಕೂಟ ಒತ್ತಾಯಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.