ಉತ್ತರ ಕನ್ನಡ

ಸಚಿವರು ರಾಜಿನಾಮೆ ನೀಡಲಿ

Published On :

ಭಟ್ಕಳ: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟು ಅರಾಜಕತೆ ನಿರ್ಮಾಣಕ್ಕೆ ಕಾರಣವಾಗಿರುವ ಗೃಹ ಸಚಿವ ಕೆ.ಕೆ. ಜಾರ್ಜ್ ಕೂಡಲೇ ರಾಜಿನಾಮೆ ನೀಡುವಂತೆ, ಸಂಚಾರಿ ಆರೋಗ್ಯ ಘಟಕ ಪುನಃ ಆರಂಭಿಸುವಂತೆ ಆಗ್ರಹಿಸಿ ಭಟ್ಕಳ ಬಿಜೆಪಿ ಘಟಕ ರಾಜ್ಯಪಾಲರಿಗೆ ಉಪ ವಿಭಾಗಾಧಿಕಾರಿಗಳ ಮೂಲಕ ಸೋಮವಾರ ಮನವಿ ಸಲ್ಲಿಸಿತು. ಮನವಿಯನ್ನು ಬಿಜೆಪಿ ಕ್ಷೇತ್ರಾಧ್ಯಕ್ಷ ಈಶ್ವರ ದೊಡ್ಮನೆ ಉಪ ವಿಭಾಗಾಧಿಕಾರಿ ಅನುಪಸ್ಥಿತಿಯಲ್ಲಿ ಕಚೇರಿ ವ್ಯವಸ್ಥಾಪಕರಿಗೆ ನೀಡಿದರು. ಪ್ರಮುಖರಾದ ಗೋವಿಂದ ನಾಯ್ಕ, ತಾಪಂ ಸದಸ್ಯೆ ಜಯಾ ನಾಯ್ಕ, ಪರಮೇಶ್ವರ ದೇವಾಡಿಗ, ವಿನೋದ ಕೊಪ್ಪಿಕರ, ದಿನೇಶ ನಾಯ್ಕ, ಮುಕುಂದ ನಾಯ್ಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.