ಕಾನೂನು ಜ್ಞಾನದಿಂದ ನ್ಯಾಯ
ಕುಮಟಾ: ಮಕ್ಕಳಿಗಾಗಿ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ರ್ಯಾಗಿಂಗ್ ವಿಷಯಗಳ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮ ಇಲ್ಲಿನ ರಾಜೇಂದ್ರ ಪ್ರಸಾದ ಸಭಾಭವನದಲ್ಲಿ ಮಂಗಳವಾರ ಜರುಗಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪಂಚಾಕ್ಷರಿ ಎಂ. ಉದ್ಘಾಟಿಸಿದರು. ಆ ನಂತರ ಅವರು ಮಾತನಾಡಿ, ಕಾನೂನು ಪ್ರಾಧಿಕಾರದ ಮೂಲ ಉದ್ದೇಶವೆಂದರೆ ಜನಸಾಮಾನ್ಯರಿಗೆ ಸಹಜ ರೀತಿಯಲ್ಲಿ ಅವರ ಭಾಷೆಯಲ್ಲಿ ಕಾನೂನು ತಿಳಿಸುವುದಾಗಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳ ಹೆಚ್ಚಾಗಿದ್ದು, ಅದರಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಇದ್ದರೆ ಅನ್ಯಾಯ ಸರಿಪಡಿಸಿಕೊಳ್ಳಬಹುದಾಗಿದೆ ಹಾಗೂ ತನ್ನ ರಕ್ಷಣೆಯನ್ನು ಕೂಡ ಮಾಡಿಕೊಳ್ಳಬಹುದಾಗಿದೆ ಎಂದರು. ಅಧ್ಯಕ್ಷತೆಯನ್ನು ಸಿವಿಲ್ ನ್ಯಾಯಾಧೀಶ ಮಧುಸೂದನ ಡಿ.ಕೆ. ವಹಿಸಿ ಮಾತನಾಡಿ, ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಕಾನೂನು ಮಾಹಿತಿ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾನೂನು ಬೆಂಕಿಯಂತೆ, ಅದನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡಾಗ ತಮ್ಮ ರಕ್ಷಣೆ ಮಾಡಿಕೊಳ್ಳಬಹುದು. ಇಲ್ಲವಾದರೆ ಅದೇ ಬೆಂಕಿ ನಮ್ಮನ್ನು ಸುಡುತ್ತದೆ. ಆದ್ದರಿಂದ ಕಾನೂನನ್ನು ಸರಿಯಾಗಿ ಅರಿತು ನಡೆಯಬೇಕು ಎಂದರು. ಉಪನ್ಯಾಸಕರಾಗಿ ನ್ಯಾಯವಾದಿ ಮಧು ಹೆಗಡೆ ಮಾತನಾಡಿದರು. ಸಹಾಯಕ ಸರ್ಕಾರಿ ಅಭಿಯೋಜಕ ರಮೇಶ ಕೆ.ಆರ್. ಮತ್ತು ನ್ಯಾಯವಾದಿ ಆರ್.ಜಿ. ನಾಯ್ಕ ಮಾತನಾಡಿದರು. ಸರ್ಕಾರಿ ಅಭಿಯೋಜಕ ಚಂದ್ರಶೇಖರ ಎಚ್.ಎಸ್., ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತೇಶ ನಾಯಕ, ಹಿರಿಯ ನ್ಯಾಯವಾದಿ ಎಚ್.ವಿ. ಹೆಗಡೆ ಮತ್ತು ಆರ್.ಎ. ಹೆಗಡೆ ಇದ್ದರು.
ನ್ಯಾಯವಾದಿ ನಾಗರಾಜ ಎಸ್. ಸ್ವಾಗತಿಸಿದರು. ನ್ಯಾಯವಾದಿ ಮಮತಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಗಿಬ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ವಿನಾಯಕ ಶಾನಭಾಗ ವಂದಿಸಿದರು. ಸ್ಥಳೀಯ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

