ಉತ್ತರ ಕನ್ನಡ

ಕಾರ್ಗಿಲ್ ವಿಜಯ ದಿವಸ ಆಚರಣೆ

Published On :

ಕುಮಟಾ:  ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ಶಾಲಾ ಸಂಸತ್ ಉದ್ಘಾಟನೆ ಮತ್ತು ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಮಾಜಿ ಸೈನಿಕ, ಎಲ್‌ಐಸಿ ಮ್ಯಾನೇಜರ್ ಬಿ.ಕೆ. ರವಿಕುಮಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬದುಕಿನಲ್ಲಿ ಜ್ಞಾನ ಸಂಪಾದನೆ ಅತೀ ಅವಶ್ಯ. ಜತೆಗೆ ಉತ್ತಮ ಗುಣ, ಗೆಲುವಿನ ಹಂಬಲ, ನಾಯಕತ್ವದ ಗುಣಗಳೂ ಸೇರಿರಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವಿಶ್ವಸ್ಥರಾದ ರಮೇಶ ಪ್ರಭು ಮಾತನಾಡಿದರು. ಶಾಲಾ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಮಂಗಲಾ ನಾಯ್ಕ ಪ್ರಮಾಣವಚನ ಬೋಧಿಸಿದರು. ಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಲೀಲಾವತಿ ನಾಯ್ಕ, ಶಿಕ್ಷಕ ಆರ್.ಎಚ್. ದೇಶಭಂಡಾರಿ ಉಪಸ್ಥಿತರಿದ್ದರು. ಮಕ್ಕಳು ನಾನೂ ಸೈನಿಕನಾಗುವೆ ರೂಪಕ ಪ್ರಸ್ತುತ ಪಡಿಸಿದರು. ಲಕ್ಷ್ಮೀ ಹೆಗಡೆ ಅವರ ಸಂಯೋಜನೆಯಲ್ಲಿ ಮಕ್ಕಳು ದೇಶಭಕ್ತಿಗೀತೆ ಹಾಡಿದರು. ಮುಖ್ಯ ಶಿಕ್ಷಕಿ ಸುಜಾತಾ ನಾಯ್ಕ ಸ್ವಾಗತಿಸಿದರು. ಗೀತಾ ಪಟಗಾರ ನಿರೂಪಿಸಿದರು. ಸಾವಿತ್ರಿ ಹೆಗಡೆ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.