ಮತದಾನ ಮಾಡಲು ದಿವ್ಯಾಂಗ ಮತದಾರರಿಗೆ ಓಲಾದಿಂದ ಉಚಿತ ಸೇವೆ
ದಿವ್ಯಾಂಗ ಮತದಾರರಿಗೆ ಮತದಾನಕ್ಕೆ ಅನುವು ಮಾಡಿಕೊಡುವ ಸಲುವಾಗಿ ಮೂರು ಕ್ಷೇತ್ರಗಳ 1,651 ಮತಗಟ್ಟೆ ವಲಯಗಳಿಗೆ ಒಂದು ಗಾಲಿ ಕುರ್ಚಿಗಳನ್ನು ಒದಗಿಸಲಾಗಿದೆ.

Published On :
ಬೆಂಗಳೂರು: ದಿವ್ಯಾಂಗ ಮತದಾರರಿಗೆ ಮತದಾನಕ್ಕೆ ಅನುವು ಮಾಡಿಕೊಡುವ ಸಲುವಾಗಿ ಮೂರು ಕ್ಷೇತ್ರಗಳ 1,651 ಮತಗಟ್ಟೆ ವಲಯಗಳಿಗೆ ಒಂದು ಗಾಲಿ ಕುರ್ಚಿಗಳನ್ನು ಒದಗಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್,
ಮತದಾನಕ್ಕೆ ಮುನ್ನ 1950 ಸಂಖ್ಯೆಗೆ ಕರೆ ಮಾಡಿ ನೋಂದಣಿ ಮಾಡಿಕೊಂಡವರಿಗೆ ಚುನಾವಣಾ ಆಯೋಗ ಒಂದು ಕೂಪನ್ ನೀಡಲಿದೆ. ಅದರಲ್ಲಿನ ಸಂಖ್ಯೆಯ ನೆರವಿನಿಂದ ದಿವ್ಯಾಂಗರು ಆಯೋಗ ಒದಗಿಸುವ ಉಚಿತ ಸಾರಿಗೆ ಸೇವೆಯನ್ನು ಪಡೆಯಬಹುದು. ಜೊತೆಗೆ, ಓಲಾ ಸಂಸ್ಥೆ ಕೂಡ ತಮ್ಮ ಸಿಎಸ್‍ಆರ್ ಯೋಜನೆ ಮೂಲಕ ದಿವ್ಯಾಂಗರನ್ನು ಉಚಿತವಾಗಿ ಮತಗಟ್ಟೆಗೆ ಕರೆತರುವ ಹಾಗೂ ಮರಳಿ ಕರೆದೊಯ್ಯುವ ಸೇವೆ ಒದಗಿಸುವ ಪ್ರಸ್ತಾವನೆ ಸಲ್ಲಿಸಿದೆ. ಅದು ಪರಿಶೀಲನೆಯಲ್ಲಿದೆ ಎಂದರು.
90.84 ಲಕ್ಷ ಮತದಾರರು
ಮೂರು ಕ್ಷೇತ್ರಗಳಲ್ಲಿ ಮತದಾನದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಮತಪಟ್ಟಿಯಲ್ಲಿ 90.84 ಮತದಾರರು ತಮ್ಮ ಹಕ್ಕು ಚಲಾಯಿಸುವ ಅರ್ಹತೆ ಪಡೆದುಕೊಂಡಿದ್ದಾರೆ. ಏ 25ರಿಂದ ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಮತದಾರರ ಕೈಪಿಡಿ ಹಾಗೂ ಮತದಾರರ ಸ್ಲಿಪ್ ವಿತರಣೆಯಲ್ಲಿ ತೊಡಗಲಿದ್ದಾರೆ. ಏ.11ರೊಳಗೆ ವಿತರಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಮೂರು ಕ್ಷೇತ್ರಗಳಲ್ಲಿ ಒಟ್ಟು 8,500 ಮತಗಟ್ಟೆಗಳಿದ್ದು, ಅದರ ನಿರ್ವಹಣೆಗೆ ಒಟ್ಟು 45,000 ಮತಗಟ್ಟೆಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವರಲ್ಲಿ 27 ಸಾವಿರ ಹಿರಿಯ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ ನೀಡಲಾಗಿದ್ದು, ಉಳಿದವರಿಗೆ ಎರಡನೇ ಹಂತದ ತರಬೇತಿ ನೀಡಲಾಗುವುದು. ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೂರು ಕ್ಷೇತ್ರಗಳಲ್ಲಿ ಒಟ್ಟು 1,600 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಅಲ್ಲಿ 1,204 ಮೈಕ್ರೋ ಪರಿವೀಕ್ಷಕರು ಹಾಗೂ 400 ವೆಬ್ ಕಾಸ್ಟಿಂಗ್ ಕ್ಯಾಮೆರಾ ಅಳವಡಿಸಲಾಗಿದೆ. ಪರಿವೀಕ್ಷಕರಲ್ಲಿ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯದ ಉದ್ಯೋಗಿಗಳಿದ್ದಾರೆ ಎಂದು ಮಾಹಿತಿ ನೀಡಿದರು.
ಮತ ಎಣಿಕೆ ಕೇಂದ್ರಗಳ ಬದಲಾವಣೆ
ಈ ಬಾರಿ ಮತ ಎಣಿಕೆ ಕೇಂದ್ರಗಳನ್ನು ಬದಲಾಯಿಸಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ಮತಗಳನ್ನು ಮಲ್ಯ ಆಸ್ಪತ್ರೆ ರಸ್ತೆಯ ಸೈಂಟ್ ಜೋಸೆಫ್ ಪ್ರೌಢ ಶಾಲೆ, ಕೇಂದ್ರ ಕ್ಷೇತ್ರದ ಮತಗಳನ್ನು ಮೌಂಟ್ ಕಾರ್ಮೆಲ್ ಕಾಲೇಜು ಹಾಗೂ ದಕ್ಷಿಣ ಕ್ಷೇತ್ರದ ಮತಗಳ ಎಣಿಕೆ ಜಯನಗರದ ಎಸ್ಎಸ್ಎಂಆರ್ ವಿ ಕಾಲೇಜಿನಲ್ಲಿ ನಡೆಸುವಂತೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


