ನೇರ ಪ್ರಸಾರ ಕಾರ್ಯಕ್ರಮದಲ್ಲಿ ಬಿಜೆಪಿ ವಕ್ತಾರನ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ! ವಿಡಿಯೋ ವೈರಲ್!
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ರಾಜಕಾರಣಿಗಳು ಎದುರಾಳಿ ಪಕ್ಷದ ನಾಯಕರ ವಿರುದ್ಧ ಆರೋಪ, ವಾಗ್ದಾಳಿ ನಡೆಸುವಲ್ಲಿ ನಿರತರಾಗಿದ್ದಾರೆ.

Published On :
ನವದೆಹಲಿ: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ರಾಜಕಾರಣಿಗಳು ಎದುರಾಳಿ ಪಕ್ಷದ ನಾಯಕರ ವಿರುದ್ಧ ಆರೋಪ, ವಾಗ್ದಾಳಿ ನಡೆಸುವಲ್ಲಿ ನಿರತರಾಗಿದ್ದಾರೆ. ಈ ವಾಗ್ದಾಳಿ ಕೆಲವೊಮ್ಮೆ ವಿಕೋಪಕ್ಕೆ ತಿರುಗಿರುವ ಉದಾಹರಣೆಗಳಿದ್ದು ಅಂತಹದ್ದೇ ಘಟನೆ ಈಗ ನಡೆದಿದೆ.
ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ನಾಯಕ ಬಿಜೆಪಿ ವಕ್ತಾರನ ಮೇಲೆ ನೀರಿನ ಲೋಟ ಎಸೆದು ಹಲ್ಲೆಗೆ ಮುಂದಾಗಿರುವ ಘಟನೆ ನಡೆದಿದೆ.
ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಅಲೋಕ್ ಶರ್ಮಾ ಬಿಜೆಪಿ ವಕ್ತಾರ ಕೆ.ಕೆ ಶರ್ಮಾ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.
ಬಿಜೆಪಿ ವಕ್ತಾರ ನೇರ ಪ್ರಸಾರದಲ್ಲಿ ಹಲವು ಬಾರಿ ಕಾಂಗ್ರೆಸ್ ನಾಯಕ ಅಲೋಕ್ ಶರ್ಮಾ ಅವರನ್ನು "ದೇಶದ್ರೋಹಿ" ಎಂದು ಹೇಳಿದ್ದಾರೆ. ಇದರಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ನಾಯಕ ನೀರಿನ ಲೋಟ ಎಸೆದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಕಾರ್ಯಕ್ರಮ ನಿರೂಪಕನ ಜಾಕೆಟ್ ಕೂಡ ಒದ್ದೆಯಾಗಿದೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗದಿದ್ದರೂ ಗಾಜು ಪುಡಿಯಾಗಿ ಹರಡಿತ್ತು. ಅಲೋಕ್ ಶರ್ಮಾ ನಡೆದುಕೊಂಡ ರೀತಿಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ವಕ್ತಾರ ಆಗ್ರಹಿಸಿದ್ದರೆ, ತನ್ನನ್ನು ದೇಶದ್ರೋಹಿ ಎಂದು ಕರೆದ ಕೆ.ಕೆ ಶರ್ಮಾ ಕೂಡ ಕ್ಷಮೆ ಕೇಳಲಿ ಎಂಬುದು ಕಾಂಗ್ರೆಸ್ ನಾಯಕನ ಆಗ್ರಹ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congress Leaderಹಲ್ಲೆಕಾಂಗ್ರೆಸ್ ನಾಯಕBJP Spokespersonಬಿಜೆಪಿ ವಕ್ತಾರLok Sabha Elections 2019ಲೋಕಸಭಾ ಚುನಾವಣೆ 2019live Tv debate
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


