ಮಂಡ್ಯದಲ್ಲಿ ಸುಮಲತಾ ಗೆಲುವಿಗಾಗಿ ಅಂಬಿ ಅಭಿಮಾನಿಗಳ ವಿಶೇಷ ಪ್ಲಾನ್!
ಮಂಡ್ಯ ಲೋಕಸಭೆ ಚುನಾವಣೆಗೆ ನಟಿ ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಸಿದ್ದಾರೆ, ನಾಮಪತ್ರ ಸಲ್ಲಿಕೆ ವೇಳೆ ಸಮರೋಪಾದಿಯಲ್ಲಿ ಜನ ಸೇರಿದ್ದರು. ಈಗ ಸದ್ಯ ...

Published On :
ಮೈಸೂರು: ಮಂಡ್ಯ ಲೋಕಸಭೆ ಚುನಾವಣೆಗೆ ನಟಿ ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಸಿದ್ದಾರೆ, ನಾಮಪತ್ರ ಸಲ್ಲಿಕೆ ವೇಳೆ ಸಮರೋಪಾದಿಯಲ್ಲಿ ಜನ ಸೇರಿದ್ದರು. ಈಗ ಸದ್ಯ ಅಂಬರೀಷ್ ಅಭಿಮಾನಿಗಳು ಸಮುಲತಾ ಗೆಲುವಿಗಾಗಿ ವಿಶೇಷ ತಂತ್ರ ರೂಪಿಸುತ್ತಿದ್ದಾರೆ.
ವಿರೋಧ ಪಕ್ಷಗಳಿಗೆ ಕೌಂಟರ್ ನೀಡಲು ಅಂಬಿ ಅಭಿಮಾನಿಗಳು, ತಮ್ಮದೇ ಆದ ತಂಡ ರಚಿಸಿಕೊಂಡು, ಬೂತ್ ಮಟ್ಟದಲ್ಲಿ ಪ್ರಚಾರಕ್ಕಿಳಿದಿದ್ದಾರೆ, ಸುಮಾರು 50 ಸಾವಿರ ಅಭಿಮಾನಿಗಳು, 2,030 ಬೂತ್ ಗಳಲ್ಲಿ ಮಂಡ್ಯಲೋಕಸಭಾ ಕ್ಷೇತ್ರದ 16 ಲಕ್ಷ ಮತದಾರರು ತಲುಪಿ ಪ್ರಚಾರಪ ಮಾಡುತ್ತಿದ್ದಾರೆ, 916 ಗ್ರಾಮಗಳಲ್ಲಿ ಅಂಬಿ ಅಭಿಮಾನಿಗಳ ಸಂಘ ಸ್ಥಾಪಿಸಲಾಗಿದೆ,
ಸುಮಾರು 50 ಲಕ್ಷ ಅಂಬರೀಷ್ ಅಭಿಮಾನಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಂಬರೀಷ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸೋಮಶೇಖರ್ ಹೇಳಿದ್ದಾರೆ. ನಾವು ಎಲ್ಲರಿಗೂ ಕರೆ ಮಾಡಿ ಸುಮಲತಾ ಅವರ ಗೆಲುವಿಗಾಗಿ ಕೆಲಸ ಮಾಡುವಂತೆ ಮನವಿ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಅಂಬರೀಷ್ ಅಭಿಮಾನಿಗಳ ಬಗ್ಗೆ ನಮಗೆ ಯಾವುದೇ ಆತಂಕವಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ, ಮತದಾರರ ಮೇಲೆ ಅಂಬಿ ಅಭಿಮಾನಿಗಳು ಯಾವುದೇ ಪರಿಣಾಮ ಬೀರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ, ಜೊತೆಗೆ ರೈತ ಸಂಘ ಕಾರ್ಯಕರ್ತರು ಸುಮಲತಾ ಅವರನ್ನು ಬೆಂಬಲಿಸುತ್ತಿರುವುದು ಮತ್ತೊಂದು ಪ್ಲಸ್ ಪಾಯಿಂಟ್ ಆಗಿದೆ.
ಮಂಡ್ಯದಲ್ಲಿ ಕಾಂಗ್ರೆಸ್ ಉಳಿಸಿಕೊಳ್ಳುವ ಸಲುವಾಗಿ ನಾವು ಸುಮಲತಾ ಅವರಿಗೆ ಬೆಂಬಲ ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


