ಜೈಪುರ ಗ್ರಾಮಾಂತರ ಕ್ಷೇತ್ರ: ರಾಜ್ಯವರ್ಧನ್ ರಾಥೋಡ್ ಗೆ ಕೃಷ್ಣಾ ಪೂನಿಯಾ ಎದುರಾಳಿ
ಒಲಿಂಪಿಕ್ ಪದಕ ವಿಜೇತೆ, ಡಿಸ್ಕಸ್ ಥ್ರೋ ಆಟಗಾರ್ತಿ ಕೃಷ್ಣ ಪೂನಿಯಾ ಕೇಂದ್ರ ವಾರ್ತಾ ಸಚಿವ ರಾಜ್ಯವರ್ಧನ್ ಸಿಂಗ್ ಎದುರಾಳಿಯಾಗಿ ಜೈಪುರ ಗ್ರಾಮಾಂತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ನವದೆಹಲಿ: ಒಲಿಂಪಿಕ್ ಪದಕ ವಿಜೇತೆ, ಡಿಸ್ಕಸ್ ಥ್ರೋ ಆಟಗಾರ್ತಿ ಕೃಷ್ಣ ಪೂನಿಯಾ ಕೇಂದ್ರ ವಾರ್ತಾ ಸಚಿವ ರಾಜ್ಯವರ್ಧನ್ ಸಿಂಗ್ ಎದುರಾಳಿಯಾಗಿ ಜೈಪುರ ಗ್ರಾಮಾಂತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ನಿನ್ನೆ ಬಿಡುಗಡೆ ಮಾಡಿದ 9 ಅಭ್ಯರ್ಥಿಗಳ ಪಟ್ಟಿಯಲ್ಲಿ ಕೃಷ್ಣ ಪೂನಿಯಾ ಅವರಿಗೆ ಜೈಪುರ ಗ್ರಾಮಾಂತರ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಮೂರು ಬಾರಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಕೃಷ್ಣಾ ಪೂನಿಯಾ ರಾಜಸ್ತಾನದ ಸಾದಲ್ಪುರ್ ಕ್ಷೇತ್ರದ ಶಾಸಕಿಯಾಗಿದ್ದಾರೆ.
ರಾಜಸ್ತಾನದ ಆರು, ಮಹಾರಾಷ್ಟ್ರದ 2 ಹಾಗೂ ಗುಜರಾತಿನ 1 ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ನಿನ್ನೆ ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಮೋಹನ್ ಜೋಷಿ ಅವರನ್ನು ಪುಣೆಯಿಂದ ಕಣಕ್ಕಿಳಿಸಲಾಗುತ್ತಿದೆ.
2010 ರ ದೆಹಲಿ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕೃಷ್ಣ ಪೂನಿಯಾ ಡಿಸ್ಕಸ್ ಥ್ರೋಯಿಂಗ್ ನಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


