ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಸೇರ್ಪಡೆ
ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Published On :
ನವದೆಹಲಿ: ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕ್ಯಾ. ಶಾಲಿನಿ ಸಿಂಗ್ ಪಕ್ಷ ಸೇರ್ಪಡೆ ವಿಷಯವನ್ನು ಆಮ್ ಆದ್ಮಿ ರಾಷ್ಟ್ರಿಯ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮಂಗಳವಾರ ಪ್ರಕಟಿಸಿದ್ದಾರೆ.
“ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಹಾಗೂ ಮಿಸೆಸ್ ಇಂಡಿಯಾ ಶಾಲಿನಿ ಸಿಂಗ್ ಇಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಲು ಹೆಮ್ಮೆಯಾಗುತ್ತದೆ” ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.
“ಸ್ವಹಿತಕ್ಕಿಂತ ದೇಶದ ಹಿತ ಮೊದಲು ಎಂದು ಬಯಸುವ ಕುಟುಂಬದ ಹಿನ್ನೆಲೆಯಿಂದ ಬಂದಿರುವ ನಾನು, ದೆಹಲಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆಮ್ ಆದ್ಮಿ ಸರ್ಕಾರದ ಕಾರ್ಯವೈಖರಿಯನ್ನು ಕಂಡು ಪಕ್ಷಕ್ಕೆ ಸೇರ್ಪಡಯಾಗಿರುವೆ” ಎಂದು ಕ್ಯಾಪ್ಟನ್ ಶಾಲಿನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


