ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಟ್ ರದ್ದು, ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಮನ್ನಾ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಲವು ಆಶೋತ್ತರಗಳನ್ನು ಹೊತ್ತ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ನೀಟ್ ರದ್ದುಗೊಳಿಸುವುದಾಗಿ...

Published On :
ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಲವು ಆಶೋತ್ತರಗಳನ್ನು ಹೊತ್ತ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ನೀಟ್ ರದ್ದುಗೊಳಿಸುವುದಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಕೇಂದ್ರ ಸರ್ಕಾರ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಶಾಲಾ ಶಿಕ್ಷಣವನ್ನು ಕೇಂದ್ರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ಸೇರಿಸುವ ಹಾಗೂ ಉನ್ನತ ಶಿಕ್ಷಣವನ್ನು ಕೇಂದ್ರ ಪಟ್ಟಿಯಲ್ಲೇ ಉಳಿಸಿಕೊಳ್ಳುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
ಇಂದು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಈ ಪ್ರಣಾಳಿಕೆ ಕಾಂಗ್ರೆಸ್ ಗೆ ಮುಂದಿನ ಹೆಜ್ಜೆಯಿಡಲು ನಾಂದಿಯಾಗಲಿದೆ. ವರ್ಷದ ಹಿಂದೆ ಪ್ರಣಾಳಿಕೆ ಸಿದ್ದಪಡಿಸಲು ಆರಂಭಿಸಿದಾಗ ದೇಶದ ಜನತೆಯ ಆಶೋತ್ತರಗಳನ್ನು ಈಡೇರಿಸಬೇಕೆಂದು ನಾನು ಹೇಳಿದ್ದೆ. ಇದರಲ್ಲಿ ನಾವು ಕೊಡುವ ಭರವಸೆಗಳು ಸತ್ಯವಾಗಿರುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


