ಪ್ರಧಾನಿ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟ ಅಕ್ಬರುದ್ದೀನ್ ಓವೈಸಿ!
ಲೋಕಸಭೆ ಚುನಾವಣೆ ಬೆನ್ನಲ್ಲೇ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ(ಎಐಎಂಐಎಂ) ಪಕ್ಷದ ನಾಯಕ ಅಕ್ಬರುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟಿದ್ದಾರೆ.

Published On :
ಹೈದರಾಬಾದ್: ಲೋಕಸಭೆ ಚುನಾವಣೆ ಬೆನ್ನಲ್ಲೇ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ(ಎಐಎಂಐಎಂ) ಪಕ್ಷದ ನಾಯಕ ಅಕ್ಬರುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವಿಷಯ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದಾರೆ. ಕೋಟ್ಯಂತರ ರುಪಾಯಿ ಖರ್ಚಿನಲ್ಲಿ ವಿಶ್ವ ಪರ್ಯಟಣೆ ಮಾಡುವ ಮೋದಿ ಅವರು ತನ್ನ ಜತೆ ಪತ್ನಿಯನ್ನು ಕರೆದುಕೊಂಡು ಹೋಗುವ ಔದಾರ್ಯ ತೋರಲಿಲ್ಲ ಎಂದು ವೈಕ್ತಿಕ ವಿಚಾರ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರ ಮಾತು ಮಿತಿ ಮೀರುತ್ತಿದೆ. ಮೊನ್ನೆಯಷ್ಟೆ ಚೌಕಿದಾರ್ ಎಂದು ಹೇಳುವ ನರೇಂದ್ರ ಮೋದಿ ತಲೆಗೆ ಟೋಪಿ ಹಾಕಿ, ಕೊರಳಲ್ಲಿ ಸೀಟಿ ಹಾಕಿ ನಿಲ್ಲಿಸುತ್ತೇನೆ ಎಂದು ಹೇಳುವ ಮೂಲಕ ಓವೈಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಲೋಕಸಭಾ ಚುನಾವಣೆAIMIMLok Sabha pollsಎಐಎಂಐಎಂAkbaruddin Owaisiಅಕ್ಬರುದ್ದೀನ್ ಓವೈಸಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


