ಪ್ರಧಾನಿ ಮೋದಿ ಚರಂಡಿ-ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ: ಅಹ್ಮದ್ ಪಟೇಲ್
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್...

Published On :
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರು, ಮೋದಿ ಚರಂಡಿ - ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಡೆಹ್ರಾಡೂನ್ ನಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ಗಾಂಧಿ ಕುಟುಂಬ ಮತ್ತು ಅಹ್ಮದ್ ಪಟೇಲ್ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು.
ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅಹ್ಮದ್ ಪಟೇಲ್ ಅವರು, “ಪ್ರಧಾನಿ ಮೋದಿ ಅವರದ್ದು ಅತ್ಯಂತ ಕೀಳು ರೀತಿಯ, ಚರಂಡಿ - ಮಟ್ಟದ ರಾಜಕಾರಣ’ಎಂದು ಟೀಕಿಸಿದ್ದಾರೆ.
“ನಾನು ಮಾಧ್ಯಮದಲ್ಲಿ ಕಂಡ ಪ್ರಕಾರ, ಅಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣದಲ್ಲಿ ಲಂಚ ಕೇಳಿದ ವ್ಯಕ್ತಿ AP ಮತ್ತು FAM ಎಂದು ಗೊತ್ತಾಗಿದೆ. ಹಗರಣದ ಚಾರ್ಜ್ ಶೀಟ್‌ನಲ್ಲಿ AP ಎಂದರೆ ಅಹ್ಮದ್ ಪಟೇಲ್ ಎಂದೂ FAM ಎಂದರೆ ಫ್ಯಾಮಿಲಿ ಎಂದೂ ಉಲ್ಲೇಖೀಸಲಾಗಿದೆ. ಯಾವ ಫ್ಯಾಮಿಲಿಗೆ ಅಹ್ಮದ್ ಪಟೇಲ್ ನಿಕಟರಾಗಿದ್ದಾರೆ ಎಂದು ಈಗ ನೀವೇ ಹೇಳಿ’ ಎಂದು ಜನರನ್ನು ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


