ಕಾಂಗ್ರೆಸ್ ಕೈ ಹಿಡಿದ್ರೂ; ಹಿಂದೂ ವಿರೋಧಿ ಹೇಳಿಕೆ ಕೊಟ್ಟ ನಟಿ ಊರ್ಮಿಳಾ ಮಾತೋಂಡ್ಕರ್
ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಮಹಾರಾಷ್ಟ್ರದ ಮುಂಬೈ ಉತ್ತರ ಲೋಕಸಭಾ ಚುನಾವಣೆಯಿಂದ ಸ್ಪರ್ಧಿಸುತ್ತಿರುವ ಬಾಲಿವುಡ್ ಹಾಟ್ ನಟಿ ಊರ್ಮಿಳಾ ಮಾತೋಂಡ್ಕರ್ ಇದೀಗ ಹಿಂದೂ ವಿರೋಧಿ...

Published On :
ಮುಂಬೈ: ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಮಹಾರಾಷ್ಟ್ರದ ಮುಂಬೈ ಉತ್ತರ ಲೋಕಸಭಾ ಚುನಾವಣೆಯಿಂದ ಸ್ಪರ್ಧಿಸುತ್ತಿರುವ ಬಾಲಿವುಡ್ ಹಾಟ್ ನಟಿ ಊರ್ಮಿಳಾ ಮಾತೋಂಡ್ಕರ್ ಇದೀಗ ಹಿಂದೂ ವಿರೋಧಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ.
ಹಿಂದೂಗಳ ಭಾವನೆಗೆ ಧಕ್ಕೆ ತರುವಂಥ ಹೇಳಿಕೆ ನೀಡಿರುವ ಆರೋಪದಲ್ಲಿ ಕಾಂಗ್ರೆಸ್ ನಾಯಕಿ ಊರ್ಮಿಳಾ ಮಾತೋಂಡ್ಕರ್ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು ಮುಂಬೈನಲ್ಲಿ ಕೇಸು ದಾಖಲಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡುವ ವೇಳೆ ಊರ್ಮಿಳಾ, ಹಿಂದೂ ಧರ್ಮವು ಜಗತ್ತಿನಲ್ಲೇ ಹಿಂಸಾತ್ಮಕ ಧರ್ಮವಾಗಿದೆ ಎಂದು ಹೇಳಿಕೆ ನೀಡಿರುವುದು ಇದೀಗ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.
ತಮ್ಮ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಊರ್ಮಿಳಾ, ನಾನು ಹಿಂದೂ ಧರ್ಮವನ್ನು ಗೌರವಿಸುತ್ತೇನೆ. ಆದರೆ ಬಿಜೆಪಿ ಪ್ರಚಾರ ಮಾಡುತ್ತಿರುವ ಹಿಂಧುತ್ವವನ್ನಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿRahul Gandhiರಾಹುಲ್ ಗಾಂಧಿಲೋಕಸಭೆ ಚುನಾವಣೆLok Sabha pollsಹಿಂದೂ ವಿರೋಧಿUrmila Matondkarಊರ್ಮಿಳಾ ಮಾತೋಂಡ್ಕರ್Anti hindu
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


