91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು, ಆಂಧ್ರ, ಸಿಕ್ಕಿಂ, ಒಡಿಶಾ ರಾಜ್ಯಗಳಲ್ಲಿ ಆಸೆಂಬ್ಲಿ ಚುನಾವಣೆ
2 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 18 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ...

Published On :
ನವದೆಹಲಿ:2 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 18 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸುತ್ತಿದ್ದಾರೆ.
ನಿತಿನ್ ಗಡ್ಕರಿ, ಕಿರಣ್ ರಿಜಿಜು, ವಿಕೆ ಸಿಂಗ್ ಮತ್ತಿತರ ಕೇಂದ್ರ ಸಚಿವರ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪಶ್ಚಿಮ ಬಂಗಾಳ, ಜಮ್ಮು- ಕಾಶ್ಮೀರ, ಮೇಘಾಲಯದಲ್ಲಿ ತಲಾ ಎರಡು , ಮೀಜೋರಾಂ, ತ್ರಿಪುರಾ, ಮಣಿಪುರ, ನಾಗಲ್ಯಾಂಡ್, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ , ಮತ್ತು ಲಕ್ಷದ್ವೀಪದ ತಲಾ 1 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಮತಗಟ್ಟೆಗಳಲ್ಲಿ ಬಿಗಿ ಬಂಧೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Odishaಒಡಿಶಾsikkimಸಿಕ್ಕಿಂಆಂಧ್ರAPfirst phaseಮೊದಲ ಹಂತಆಸೆಂಬ್ಲಿ ಚುನಾವಣೆLoksabha pollAssembly Poll ಲೋಕಸಭಾ ಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


