ದೇಶ

ಆಂಧ್ರದ ಕೆಲವೆಡೆ ಮಧ್ಯರಾತ್ರಿವರೆಗೆ ಮತದಾನಕ್ಕೆ ಅವಕಾಶ: ಇತಿಹಾಸ ಸೃಷ್ಟಿ

ನೆರೆಯ ಆಂಧ್ರಪ್ರದೇಶದ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ಇದರಿಂದಾಗಿ ಒಟ್ಟಾರೇ ಮತದಾನ ಶೇ . 80ರ ಸನ್ನಿಹಕ್ಕೆ ತಲುಪಿದೆ.

ಆಂಧ್ರದ ಕೆಲವೆಡೆ ಮಧ್ಯರಾತ್ರಿವರೆಗೆ ಮತದಾನಕ್ಕೆ ಅವಕಾಶ: ಇತಿಹಾಸ ಸೃಷ್ಟಿ
ಸಾಂದರ್ಭಿಕ ಚಿತ್ರ
Published On :

ಅಮರಾವತಿ:ನೆರೆಯ ಆಂಧ್ರಪ್ರದೇಶದ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ಇದರಿಂದಾಗಿ ಒಟ್ಟಾರೇ ಮತದಾನ  ಶೇ . 80ರ ಸನ್ನಿಹಕ್ಕೆ ತಲುಪಿದೆ.

ಕೆಲವು ಕಡೆಗಳಲ್ಲಿ ಟಿಡಿಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಡುವಿನ ಘರ್ಷಣೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿರುವ  ಬಗ್ಗೆ ವರದಿಯಾಗಿತ್ತು.

ಗುಂಟೂರು, ಕೃಷ್ಣಾ, ನೆಲ್ಲೂರು ಮತ್ತು ಕರ್ನೂಲು ಜಿಲ್ಲೆಗಳಲ್ಲಿ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನ ನಡೆದಿದೆ. ಸಂಜೆ 6 ಗಂಟೆಯಿಂದಲೂ ಸರತಿ ಸಾಲಿನಲ್ಲಿ ನಿಂತಿದ್ದ ಎಲ್ಲರಿಗೂ ಮತದಾನ ಮಾಡಲು ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದರು.

ಇವಿಎಂ ದೋಷ ಹಾಗೂ ಘರ್ಷನೆಯಿಂದಾಗಿ  400 ಮತಗಟ್ಟೆಗಳಲ್ಲಿ ಮತದಾನ ವಿಳಂಬವಾಗಿ ಸಾಗಿತ್ತು. ಗುಂಟೂರು  ಜಿಲ್ಲೆಯ ಮಂಗಳಗಿರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಗ ಪರ್ಯಾಯ ವ್ಯವಸ್ಥೆ ಮಾಡುವಲ್ಲಿ ಚುನಾವಣ ಆಯೋಗದ ವೈಫಲ್ಯತೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು.
ಇದಕ್ಕೆ ಪ್ರತಿಯಾಗಿ ವೈಎಸ್ ಆರ್ ಕಾಂಗ್ರೆಸ್ ಕೂಡಾ ಪ್ರತಿಭಟನೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.ವಿಜಯವಾಡ ಹಾಗೂ ಕರ್ನೂಲು ಜಿಲ್ಲೆಯಲ್ಲೂ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.