ನನಗೆ ಮತ ನೀಡಿ ಇಲ್ಲದಿದ್ದರೆ... ಎಂದು ಧಮ್ಕಿ ಹಾಕಿದ್ದ ಮನೇಕಾ ಗಾಂಧಿಗೆ ಷೋಕಾಸ್ ನೋಟಿಸ್!
ನಿಮಗೆ ಕೆಲಸ ಬೇಕಿದ್ದರೆ ನನಗೆ ಮತ ನೀಡಿ ಎಂದು ಮತದಾರರಿಗೆ ಎಚ್ಚರಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.

Published On :
ಲಖನೌ: ನಿಮಗೆ ಕೆಲಸ ಬೇಕಿದ್ದರೆ ನನಗೆ ಮತ ನೀಡಿ ಎಂದು ಮತದಾರರಿಗೆ ಎಚ್ಚರಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.
ಇಂದು ಉತ್ತರ ಪ್ರದೇಶದ ಸುಲ್ತಾನ್ಪುರ್ ಲೋಕಸಭಾ ಕ್ಷೇತ್ರದ ಮುಸ್ಲಿಮರು ಪ್ರಾಬಲ್ಯವಿರುವ ತುರಬ್ ಖಾನಿ ಎಂಬ ಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ಅಭ್ಯರ್ಥಿ ಮನೇಕಾ ಗಾಂಧಿ, ನೀವು ನನಗೆ ನೋಟು ಹಾಕದಿದ್ದರೆ ನಿಮಗೆ ನಾನು ಕೆಲಸ ಕೊಡುವುದಿಲ್ಲ ಎಂದು ಎಚ್ಚರಿಸಿದ್ದರು. ಈ ಹೇಳಿಕೆ ವಿವಾದದ ಸ್ವರೂಪ ಪಡೆದಿತ್ತು. ಅಲ್ಲದೆ ಪ್ರತಿಪಕ್ಷಗಳು ಈ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಮನೇಕಾ ಗಾಂಧಿ ಅವರನ್ನು ತೀವ್ರ ಟೀಕಿಸಿದ್ದವು.
ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟಿವಿಯಲ್ಲಿ ಬಂದ ವರದಿಗಳನ್ನು ಆಧರಿಸಿ ಸುಲ್ತಾನ್ ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೇಕಾಗಾಂಧಿ ಅವರಿಗೆ ಷೋಕಾಸ್ ನೋಟಿಸ್ ನೀಡಿದ್ದಾರೆ. ಅಂತೆಯೇ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಕೂಡ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶ ಉಪ ಚುನಾವಣಾಧಿಕಾರಿ ಬಿಆರ್ ತಿವಾರಿ ಅವರು, ಮನೇಕಾಗಾಂಧಿ ಅವರ ವಿವಾದಾತ್ಮಕ ಹೇಳಿಕೆಯನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣ ಸಂಬಂಧ ಸುಲ್ತಾನ್ ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಷೋಕಾಸ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ. ಅಲ್ಲದೆ ಈ ಸಂಬಂಧ ಆಯೋಗಕ್ಕೆ ವರದಿ ನೀಡಿದ್ದಾರೆ. ಕೇಂದ್ರ ಆಯೋಗಕ್ಕೆ ವರದಿ ರವಾನೆ ಮಾಡಲಾಗಿದ್ದು, ಅಲ್ಲಿಂದ ಸೂಚನೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Maneka Gandhiಮನೇಕಾ ಗಾಂಧಿElection Commissionಚುನಾವಣಾ ಆಯೋಗಲಖನೌLucknowಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


