ಬಿಜೆಪಿಯಿಂದ ಚುನಾವಣಾ ಆಕ್ರಮ: ಸೂಕ್ತ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮಾಯಾವತಿ ಒತ್ತಾಯ
ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮತದಾರರು ತಿರಸ್ಕರಿಸಿದ್ದಾರೆ. ಆದ್ದರಿಂದ ಮತದಿಂದ ಗೆಲುವು ಸಾಧ್ಯವಿಲ್ಲ ಎಂದು ಮನದಟ್ಟಾಗಿರುವ ಬಿಜೆಪಿಯವರು ನೋಟು, ಇವಿಎಂ ದುರ್ಬಳಕೆ, ಪೊಲೀಸ್, ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಗೆಲಲ್ಲು ನಿರ್ಧರಿಸಿದ್ದಾರೆ ಎಂದು ಮಾಯಾವತಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಉಳಿದ ಆರು ಹಂತಗಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಯಾವುದೇ ಅಕ್ರಮ ನಡೆಯದಂತೆ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಯಲು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಮುಂದಿನ ಹಂತದ ಚುನಾವಣಾ ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದದ್ದು ಚುನಾವಣಾ ಆಯೋಗದ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


