ಪ್ರಧಾನಿ ಮೋದಿ, ಅಮಿತ್ ಶಾ ಜನರ ಅತಿದೊಡ್ಡ ಶತ್ರುಗಳು: ಫಾರೂಖ್ ಅಬ್ದುಲ್ಲಾ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದು, ಜನರ ಅತಿದೊಡ್ಡ ಶತ್ರುಗಳಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದು, ಜನರ ಅತಿದೊಡ್ಡ ಶತ್ರುಗಳಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಜಮ್ಮು-ಕಾಶ್ಮೀರದ ಮಿರ್ ಬಹ್ರಿ ದಾಲ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಫಾರೂಖ್ ಅಬ್ದುಲ್ಲಾ, ಜಾತಿ, ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುವಲ್ಲಿ ನಂಬಿಕೆ ಹೊಂದಿರುವ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಜನರ ಅತಿದೊಡ್ಡ ಶತ್ರುಗಳಾಗಿದ್ದಾರೆ. ಆದರೆ, ಜನರು ಬಿಜೆಪಿಯ ವಿಭಜನೆಯ ಸಿದ್ಧಾಂತಕ್ಕೆ ಜೋತು ಬೀಳುವರಲ್ಲ ಎಂದರು.
ಭಾವನಾತ್ಮಕ ವಿವಾದಗಳನ್ನು ಮುನ್ನೆಲೆಗೆ ತರುವ ಮೂಲಕ ಬಿಜೆಪಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದೆ. ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಅವಕಾಶವನ್ನು ಒದಗಿಸಿರುವ ಹಾಗೂ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿರುವ ಭಾರತೀಯ ಸಂವಿಧಾನವನ್ನು ಬದಲಾಯಿಸಲು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಬಯಸಿದ್ದಾರೆ ಎಂದು ಫಾರೂಖ್ ಅಬ್ದುಲ್ಲಾ ಆರೋಪಿಸಿದರು.
ಸಂವಿಧಾನದ 370 ಹಾಗೂ 35 ಎ ವಿಧಿಯನ್ವಯ ಜಮ್ಮು- ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನದ ವಿನಾಯಿತಿಯನ್ನು ತೆಗೆದುಹಾಕಲು ಇವರಿಬ್ಬರೂ ಮುಂದಾಗಿದ್ದು, ಬಿಜೆಪಿ ಪ್ರಣಾಳಿಕೆಯಲ್ಲೂ ಸೇರಿಸಲಾಗಿದೆ. ಬಿಜೆಪಿ ಪ್ರಣಾಳಿಕೆ ಜಮ್ಮು ಕಾಶ್ಮೀರದ ಮೇಲಿನ ದ್ವೇಷವನ್ನು ಪ್ರತಿಬಿಂಬಿಸುತ್ತದೆ. ಅವರು ಬೆಂಕಿಯೊಂದಿಗೆ ಆಟವಾಡುತ್ತಿರುವುದಾಗಿ ಅವರು ಹೇಳಿದರು.
ಜಮ್ಮು- ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಲು ಯಾರಿಗೂ ಅವಕಾಶ ನೀಡುವುದಿಲ್ಲ, ನಮ್ಮ ರಾಜ್ಯದ ಸಮಗ್ರತೆ, ಜನರ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಹೋರಾಟ ನಡೆಸುವುದಾಗಿ ಫಾರೂಖ್ ಅಬ್ದುಲ್ಲಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


