ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ದುಡ್ಡು ಯಾರದ್ದು?: ರಾಹುಲ್ ಗಾಂಧಿ
ವಾಹಿನಿಗಳಲ್ಲಿ 30 ಸೆಕೆಂಡ್ ಗಳ ಜಾಹಿರಾತಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಯಾರು ಫಂಡಿಂಗ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ

Published On :
ಫತೇಪುರ್ ಸಿಕ್ರಿ: ವಾಹಿನಿಗಳಲ್ಲಿ 30 ಸೆಕೆಂಡ್ ಗಳ ಜಾಹಿರಾತಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಯಾರು ಫಂಡಿಂಗ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಫತೇಪುರ್ ಸಿಕ್ರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಬಬ್ಬರ್ ಪರ ಪ್ರಚಾರ ನಡೆಸಿರುವ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಪ್ರಶ್ನೆ ಕೇಳಿದ್ದಾರೆ.
"ಎಲ್ಲಿ ನೋಡಿದರೂ ಮೋದಿಗೆ ಪ್ರಚಾರ ನೀಡಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬರುತ್ತಿದೆ, ಯಾರು ಹಣ ನೀಡುತ್ತಿದ್ದಾರೆ, ಮೋದಿ ಜೇಬಿನಿಂದ ಈ ಹಣ ಬರುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ, ಅದನ್ನು ನೀರವ್ ಮೋದಿ, ಮೆಹುಲ್ ಚೋಕ್ಸಿ, ಲಲಿತ್ ಮೋದಿ, ವಿಜಯ್ ಮಲ್ಯ ರಂತಹ ದೇಶಭ್ರಷ್ಟ ಉದ್ಯಮಿಗಳಿಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಧಾನಿ ನರೇಂದ್ರ ಮೋದಿPM ModiRahul Gandhiರಾಹುಲ್ ಗಾಂಧಿFundingcampaigningಲೋಕಸಭಾ ಚುನಾವಣೆ 2019elections 2019ಫಂಡಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


