ಮುಸ್ಲಿಂ ಎಂಬ ಕಾರಣಕ್ಕಾಗಿ ತಮ್ಮ ತಂದೆಗೆ ಚುನಾವಣಾ ಆಯೋಗದಿಂದ ನಿರ್ಬಂಧ: ಆಜಂ ಖಾನ್ ಪುತ್ರ!
ನನ್ನ ತಂದೆ ಮುಸ್ಲಿಂ ಎಂಬ ಕಾರಣಕ್ಕಾಗಿ ಚುನಾವಣಾ ಆಯೋಗ ಅವರ ವಿರುದ್ಧ ಪ್ರಚಾರದಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಿದೆ ಎಂದು ಆಜಂ ಖಾನ್ ಪುತ್ರ, ಎಸ್ ಪಿ ನಾಯಕ ಅಬ್ದುಲ್ಲಾ ಆಜಂ ಖಾನ್ ಹೇಳಿದ್ದಾರೆ.

Published On :
ನವದೆಹಲಿ: ನನ್ನ ತಂದೆ ಮುಸ್ಲಿಂ ಎಂಬ ಕಾರಣಕ್ಕಾಗಿ ಚುನಾವಣಾ ಆಯೋಗ ಅವರ ವಿರುದ್ಧ ಪ್ರಚಾರದಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಿದೆ ಎಂದು ಆಜಂ ಖಾನ್ ಪುತ್ರ, ಎಸ್ ಪಿ ನಾಯಕ ಅಬ್ದುಲ್ಲಾ ಆಜಂ ಖಾನ್ ಹೇಳಿದ್ದಾರೆ.
ನಟಿ, ಬಿಜೆಪಿ ಅಭ್ಯರ್ಥಿ ಜಯಪ್ರಧಾ ವಿರುದ್ಧ ಅಸಭ್ಯ ರೀತಿಯ ಹೇಳಿಕೆ ನೀಡಿದ್ದ ಆಜಂ ಖಾನ್ ಗೆ 72 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಬ್ದುಲ್ಲಾ ಆಜಂ ಖಾನ್, ನನ್ನ ತಂದೆಗೆ ನಿರ್ಬಂಧ ವಿಧಿಸುವುದಕ್ಕೂ ಮುನ್ನ ಚುನಾವಣಾ ಆಯೋಗ ಸರಿಯಾದ ಪ್ರಕ್ರಿಯೆಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿದ್ದಾರೆ.
3 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸುವುದಕ್ಕೂ ಮುನ್ನ ಕನಿಷ್ಟ ನೊಟೀಸ್ ನ್ನೂ ಜಾರಿಗೊಳಿಸಿಲ್ಲ. ನನ್ನ ತಂದೆ ಮುಸ್ಲಿಂ ಎಂಬ ಕಾರಣಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ನಮ್ಮ ಮೇಲೆ ದಾಳಿ ನಡೆದಷ್ಟೂ ನಾವು ಹೆಚ್ಚು ಕೆಲಸ ಮಾಡುತ್ತೇವೆ ಎಂದು ಅಬ್ದುಲ್ಲಾ ಆಜಂ ಖಾನ್ ಹೇಳಿದ್ದಾರೆ.
ಜಯಪ್ರದ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ಹೇಳುವ ಮೂಲಕ ಆಜಂ ಖಾನ್ ವಿವಾದ ಸೃಷ್ಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


