ಲೋಕಸಮರ : ಲಖನೌದಿಂದ ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಿನ್ಹಾ ಕಣಕ್ಕೆ
ನಿನ್ನೆಯಷ್ಟೇ ಸಮಾಜವಾದಿ ಪಕ್ಷ ಸೇರಿದ್ದ ಬಾಲಿವುಡ್ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಲಖನೌ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ .

ಲಖನೌ: ನಿನ್ನೆಯಷ್ಟೇ ಸಮಾಜವಾದಿ ಪಕ್ಷ ಸೇರಿದ್ದ ಬಾಲಿವುಡ್ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಲಖನೌ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ( ಎಸ್ ಪಿ ) ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ .
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಈ ವಿಷಯವನ್ನು ಪ್ರಕಟಿಸಿದ್ದು, ಪಕ್ಷದ ನಾಯಕರೊಂದಿಗೆ ಚರ್ಚಿಸಿದ ನಂತರ ಲಖನೌ ಕ್ಷೇತ್ರದಿಂದ ಪೂನಂ ಸಿನ್ಹಾ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಯಿತು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಪೂನಂ ಸಿನ್ಹಾ ಡಿಂಪಲ್ ಯಾದವ್ ಅವರ ಸಮ್ಮುಖದಲ್ಲಿ ನಿನ್ನೆ ಎಸ್ ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಎಸ್ಪಿ ಮತ್ತು ಬಿಎಸ್ಪಿ ಸರ್ಕಾರಗಳು ಮಾಡಿರುವ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಲಖನೌ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಹೋರಾಟ ನಡೆಸಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
ಪೂನಂ ಸಿನ್ಹಾ ಪತಿ ಶತ್ರುಘ್ನ ಸಿನ್ಹಾ ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ಯಾರೂ ಧ್ವನಿ ಎತ್ತುತ್ತಾರೊ ಅಂತಹವರನ್ನು ಬಿಜೆಪಿ ನಿವೃತ್ತಿಗೊಳಿಸಲು ಯತ್ನಿಸುತ್ತಿರುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


