ದೇಶ

ಕಾಂಗ್ರೆಸ್ ಜನಾಕ್ರೋಶ ಸಭೆಯಲ್ಲಿ ಹಾರ್ದಿಕ್ ಪಟೇಲ್ ಗೆ ಕಾರ್ಯಕರ್ತನಿಂದ ಕಪಾಳಮೋಕ್ಷ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನ ಜನಾಕ್ರೋಶ ಸಭೆಯಲ್ಲೇ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ ಮಾಡಿ...

ಕಾಂಗ್ರೆಸ್ ಜನಾಕ್ರೋಶ ಸಭೆಯಲ್ಲಿ ಹಾರ್ದಿಕ್ ಪಟೇಲ್ ಗೆ ಕಾರ್ಯಕರ್ತನಿಂದ ಕಪಾಳಮೋಕ್ಷ!
ಹಾರ್ದಿಕ್ ಪಟೇಲ್
Published On :
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನ ಜನಾಕ್ರೋಶ ಸಭೆಯಲ್ಲೇ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಗುಜರಾತ್ ನ ಸುರೇಂದ್ರನಗರದಲ್ಲಿ ನಡೆದ ಜನಾಕ್ರೋಶ ರ್ಯಾಲಿಯಲ್ಲಿ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಂತೆ ಕಾರ್ಯಕರ್ತನೊಬ್ಬ ಬಂದು ಕಪಾಳಮೋಕ್ಷ ಮಾಡಿದ್ದಾನೆ. ಕಾರ್ಯಕರ್ತ ತನ್ನ ಬಳಿ ಧನ್ಯವಾದ ಅರ್ಪಿಸಲು ಬರುತ್ತಿದ್ದಾನೆ ಎಂದು ಹಾರ್ದಿಕ್ ಪಟೇಲ್ ಭಾವಿಸಿದ್ದ ಆದರೆ ಕಾರ್ಯಕರ್ತ ದಿಢೀರ್ ಅಂತಾ ಬಂದು ಕಪಾಳಕ್ಕೆ ಬಾರಿಸಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಕಾಂಗ್ರೆಸ್ ಮುಖಂಡರು ಗಲಿಬಿಲಿಕೊಂಡರು.
ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನಕ್ಕೂ ಮುನ್ನ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಗೆ ಸೇರಿಕೊಂಡಿದ್ದರು. 2015ರಲ್ಲಿ ಪಾಟಿದಾರ್ ಸಮುದಾಯದ ಪರವಾಗಿ ಧ್ವನಿ ಎತ್ತಿದ್ದ ಹಾರ್ದಿಕ್ ಪಟೇಲ್ ಸಮುದಾಯದ ನಾಯಕನಾಗಿ ಗುರುತಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.