ಮತ್ತೊಂದು ಬಿಜೆಪಿ ಪಟ್ಟಿ ಬಿಡುಗಡೆ: ಮಾಜಿ ಕ್ರಿಕೆಟಿಗ ಗಂಭೀರ್ ಸ್ಫರ್ಧೆ, ಎಲ್ಲಿಂದ ಸ್ಪರ್ಧೆ?
ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದು ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

Published On :
ನವದೆಹಲಿ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದು ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಬಿಜೆಪಿ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪೂರ್ವ ದೆಹಲಿಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ದೆಹಲಿಯ ಏಳು ಲೋಕಸಭೆ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪೂರ್ವ ದೆಹಲಿಯಲ್ಲಿ ಗಂಭೀರ್ ಅಭ್ಯರ್ಥಿಯಾದರೆ, ನವದೆಹಲಿ ಕ್ಷೇತ್ರದಿಂದ ಮೀನಾಕ್ಷಿ ಲೇಖಿ ಕಣಕ್ಕಿಳಿಯಲಿದ್ದಾರೆ. 2014ರಲ್ಲೂ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhibjpಬಿಜೆಪಿGautam Gambhirಗೌತಮ್ ಗಂಭೀರ್ಲೋಕಸಭೆ ಚುನಾವಣೆLok Sabha pollsEast Delhiಪೂರ್ವ ದೆಹಲಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


