ಪಕ್ಷದ ಅಧ್ಯಕ್ಷರು ಸಮ್ಮತಿಸಿದರೆ ವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧಿಸಲು ಸಿದ್ದ: ಪ್ರಿಯಾಂಕಾ
ಪಕ್ಷದ ಅಧ್ಯಕ್ಷರು ಸೂಚಿಸಿದರೆ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಂಡಿತಾ ಖುಷಿಯಿಂದ ಸ್ಪರ್ಧಿಸುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ...

Published On :
ಕಲ್ಪೆಟಾ: ಪಕ್ಷದ ಅಧ್ಯಕ್ಷರು ಸೂಚಿಸಿದರೆ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಂಡಿತಾ ಖುಷಿಯಿಂದ ಸ್ಪರ್ಧಿಸುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುತ್ತೀರಾ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ ನಗುತ್ತಲೇ ಉತ್ತರಿಸಿ ಅಚ್ಚರಿ ಮೂಡಿಸಿದರು.
ಕೇರಳದ ವಯನಾಡ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಕೇರಳದ ಯೋಧ ವಿ.ವಿ. ವಸಂತ ಕುಮಾರ್ ಅವರ ನಿವಾಸಕ್ಕೆ ರವಿವಾರ ಭೇಟಿ ನೀಡಿದ್ದರು.
ಸ್ವಲ್ಪ ಹೊತ್ತು ಅವರ ಕುಟುಂಬದ ಜತೆ ಕಳೆದ ಪ್ರಿಯಾಂಕಾ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಅನಂತರ ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ಪ್ರಸಕ್ತ ಲೋಕಸಭೆ ಚುನಾವಣೆಯು ಸಾಮಾನ್ಯ ಚುನಾವಣೆಯಲ್ಲ. ಸಂಕುಚಿತ ಮನಸ್ಥಿತಿಯ ಸಿದ್ಧಾಂತದಿಂದ ದೇಶವನ್ನು ರಕ್ಷಿಸಲೆಂದು ನೀವು ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressVaranasiವಾರಣಾಸಿPriyanka Gandhiಪ್ರಿಯಾಂಕಾ ಗಾಂಧಿಲೋಕಸಭೆ ಚುನಾವಣೆLok Sabha polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


