ದೇಶ

ಬಾಲಿವುಡ್ ನಟ ಸನ್ನಿ ಡಿಯೋಲ್ ಬಿಜೆಪಿ ಸೇರ್ಪಡೆ, ಅಮೃತಸರದಿಂದ ಸ್ಪರ್ಧೆ ಸಾಧ್ಯತೆ!

ನಿರೀಕ್ಷೆಯಂತೆಯೇ ಖ್ಯಾತ ಬಾಲಿವುಡ್ ನಟ ಸನ್ನಿ ಡಿಯೋಲ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅಮೃತಸರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಾಲಿವುಡ್ ನಟ ಸನ್ನಿ ಡಿಯೋಲ್ ಬಿಜೆಪಿ ಸೇರ್ಪಡೆ, ಅಮೃತಸರದಿಂದ ಸ್ಪರ್ಧೆ ಸಾಧ್ಯತೆ!
ಸನ್ನಿ ಡಿಯೋಲ್ ಬಿಜೆಪಿ ಸೇರ್ಪಡೆ
Published On :
ನವದೆಹಲಿ: ನಿರೀಕ್ಷೆಯಂತೆಯೇ ಖ್ಯಾತ ಬಾಲಿವುಡ್ ನಟ ಸನ್ನಿ ಡಿಯೋಲ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅಮೃತಸರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸನ್ನಿ ಡಿಯೋಲ್ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ನಿರ್ಮಲಾ ಸೀತಾರಾಮನ್ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಸನ್ನಿ ಡಿಯೋಲ್, ನಮ್ಮ ತಂದೆ ಕೂಡ ಅಟಲ್ ಜೀ ಅವರನ್ನು ತುಂಬಾ ಇಷ್ಟ ಪಡುತ್ತಿದ್ದರು. ಹಾಗೆಯೇ ಅವರ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದರು. ಹಾಗೆಯೇ ನಾನೂ ಕೂಡ ಪ್ರಧಾನಿ ಮೋದಿ ಅವರನ್ನು ಇಷ್ಟ ಪಡುತ್ತೇನೆ. ಅವರಿಗಾಗಿ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ಸನ್ನಿ ಡಿಯೋಲ್ ತಮ್ಮ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಪಡೆದಿದ್ದರು. ಅಲ್ಲದೆ  ಪಂಜಾಬ್ ನ ಅಮೃತಸರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತು ಅಮಿತ್ ಶಾರೊಂದಿಗೆ ಚರ್ಚೆ ನಡೆಸಿದ್ದರು ಎಂದು ಕೂಡ ಹೇಳಲಾಗಿತ್ತು. ಡಿಯೋಲ್ ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.