ರಷ್ಯಾದವರು ಹಣ ಪಡೆದು ಇವಿಎಂ ಗಳನ್ನು ಹ್ಯಾಕ್ ಮಾಡುತ್ತಾರೆ: ಚಂದ್ರಬಾಬು ನಾಯ್ಡು ಆರೋಪ
ಮತಯಂತ್ರಗಳ ವಿಶ್ವಾಸಾರ್ಹತೆಯನ್ನು ಮತ್ತೊಮ್ಮೆ ಪ್ರಶ್ನಿಸಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಈಗ ಇವಿಎಂ ತಿರುಚುವ ಕಲೆ ರಷ್ಯನ್ನರಿಗೆ ಕರಗತ ಎಂದು ಹೇಳಿದ್ದಾರೆ.

Published On :
ಆಂಧ್ರಪ್ರದೇಶ: ಮತಯಂತ್ರಗಳ ವಿಶ್ವಾಸಾರ್ಹತೆಯನ್ನು ಮತ್ತೊಮ್ಮೆ ಪ್ರಶ್ನಿಸಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಈಗ ಇವಿಎಂ ತಿರುಚುವ ಕಲೆ ರಷ್ಯನ್ನರಿಗೆ ಕರಗತ ಎಂದು ಹೇಳಿದ್ದಾರೆ.
ರಷ್ಯಾದ ಕೆಲವು ಜನರು ಸಕ್ರಿಯರಾಗಿದ್ದು, ಅವರು ಒಂದಷ್ಟು ಕೋಟಿ ರೂಪಾಯಿಗಳನ್ನು ನೀಡಿದರೆ ಇವಿಎಂ ನ್ನು ಹ್ಯಾಕ್ ಮಾಡುತ್ತಾರೆ ಎಂಬ ವದಂತಿಗಳಿವೆ, ಇದನ್ನು ನಾನು ದೃಢೀಕರಿಸಲು ಸಾಧ್ಯವಿಲ್ಲ. ಆದರೆ ಕೋಟಿಗಳ ಲೆಕ್ಕದಲ್ಲಿ ಅವರಿಗೆ ಹಣ ನೀಡಿದರೆ ಇವಿಎಂ ಹ್ಯಾಕ್ ಮಾಡಿ ಗೆಲ್ಲಲು ಸಾಧ್ಯವಾಗುವಂತೆ ಮಾಡುತ್ತಾರೆ ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಇವಿಎಂಗಳನ್ನು ವಿವಿಧ ರೀತಿಗಳಲ್ಲಿ ಹ್ಯಾಕ್ ಮಾಡಬಹುದು, 18 ರಾಷ್ಟ್ರಗಳು ಇವಿಎಂ ಗಳನ್ನು ಬಳಸುತ್ತಿವೆ ಎಂದು ನಾಯ್ಡು ಹೇಳಿದ್ದಾರೆ.
ಚುನಾವಣೆಯ ನಂತರ ಚುನಾವಣಾ ಆಯೋಗ ಎಲ್ಲಾ ವಿವಿಪ್ಯಾಟ್ ರೋಲ್ ಗಳನ್ನೂ ತಪಾಸಣೆಗೊಳಪಡಿಸಬೇಕೆಂದು ಚಂದ್ರಬಾಬು ನಾಯ್ಡು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


