ದೇಶ

ಕೇರಳದಲ್ಲಿ ಬಿಜೆಪಿಯ ಮಹತ್ವಾಕಾಂಕ್ಷೆ ಅಂತ್ಯ: ಮುಖ್ಯಮಂತ್ರಿ ಪಿಣರಾಯ್ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಕಣ್ಣೂರು ಜಿಲ್ಲೆಯ ಆರ್ ಸಿ ಅಮಾಲಾ ಬೇಸಿಕ್ ಯುಪಿ ಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ವಿಜಯನ್ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಕೇರಳದಲ್ಲಿ ಬಿಜೆಪಿಯ ಮಹತ್ವಾಕಾಂಕ್ಷೆ ಅಂತ್ಯ: ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಮುಖ್ಯಮಂತ್ರಿ ಪಿಣರಾಯ್ ವಿಜಯನ್
Published On :

ಕೇರಳ: ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಕಣ್ಣೂರು ಜಿಲ್ಲೆಯ ಆರ್ ಸಿ ಅಮಾಲಾ ಬೇಸಿಕ್ ಯುಪಿ ಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ವಿಜಯನ್  ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ಕೇರಳ ರಾಜ್ಯದಲ್ಲಿ ಈ ಚುನಾವಣೆಯಲ್ಲಿ ಎಲ್ ಡಿಎಫ್ ಹಾಗೂ ಯುಡಿಎಫ್ ನಡುವಣ ಹೋರಾಟವಾಗಿದೆ. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಕೊನೆಯ ಸ್ಥಾನಕ್ಕೆ ಹೋಗಲಿದೆ. ಈ ಚುನಾವಣೆ ಮೂಲಕ ಬಿಜೆಪಿಯ ಎಲ್ಲಾ ಮಹತ್ವಾಕಾಂಕ್ಷೆಗಳು ಅಂತ್ಯಗೊಳ್ಳಲಿವೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವುದರಿಂದ ಕೇರಳದ ಚುನಾವಣೆ ರಾಷ್ಟ್ರದ ಗಮನ ಸೆಳೆದಿದೆ.
227 ಅಭ್ಯರ್ಥಿಗಳು ಕಣದಲ್ಲಿದ್ದು, 2.62 ಕೋಟಿಗೂ ಅಧಿಕ ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ. ಕಳೆದ ಬಾರಿ ಶೇ. 74.02 ರಷ್ಟು ಮತದಾನವಾಗಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮತದಾನದ ಬಗ್ಗೆ ನಿರೀಕ್ಷೆ ಹೊಂದಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.