ಲೋಕಸಭಾ ಚುನಾವಣೆ 2019, 4ನೇ ಹಂತ: 210 ಅಭ್ಯರ್ಥಿಗಳದು ಕ್ರಿಮಿನಲ್ ಹಿನ್ನೆಲೆ!
ಲೋಕಸಭಾ ಚುನಾವಣೆ 2019 ರ 4 ನೇ ಹಂತದ ಮತದಾನ ಏ.29 ಕ್ಕೆ ನಡೆಯಲಿದ್ದು, ಒಟ್ಟಾರೆ ಕಣದಲ್ಲಿರುವ 928 ಅಭ್ಯರ್ಥಿಗಳ ಪೈಕಿ 210 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ.

Published On :
ನವದೆಹಲಿ: ಲೋಕಸಭಾ ಚುನಾವಣೆ 2019 ರ 4 ನೇ ಹಂತದ ಮತದಾನ ಏ.29 ಕ್ಕೆ ನಡೆಯಲಿದ್ದು, ಒಟ್ಟಾರೆ ಕಣದಲ್ಲಿರುವ 928 ಅಭ್ಯರ್ಥಿಗಳ ಪೈಕಿ 210 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ.
ಅಸೋಸಿಯೇಷನ್ ಆಫ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ಡಾಟಾ ಪ್ರಕಾರ 158 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿದ್ದರೆ. 210 ಅಭ್ಯರ್ಥಿಗಳ ವಿರುದ್ಧ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ.
12 ಅಭ್ಯರ್ಥಿಗಳು ತಮ್ಮ ವಿರುದ್ಧದ ಆರೋಪ ಸಾಬೀತಾಗಿದೆ ಎಂಬ ಮಾಹಿತಿ ನೀಡಿದ್ದರೆ, 5 ಅಭ್ಯರ್ಥಿಗಳು ಕೊಲೆಗೆ ಸಂಬಂಧಪಟ್ಟ ಪ್ರಕರಣ ತಮ್ಮ ವಿರುದ್ಧ ದಾಖಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. 24 ಅಭ್ಯರ್ಥಿಗಳು ಕೊಲೆ ಯತ್ನದ ಪ್ರಕರಣ ಎದುರಿಸುತ್ತಿದ್ದರೆ 21 ಅಭ್ಯರ್ಥಿಗಳು ಮಹಿಳೆಯರ ವಿರುದ್ಧ ದೌರ್ಜನ್ಯ ನಡೆಸಿರುವ ಪ್ರಕರಣವನ್ನು ಎದುರಿಸುತ್ತಿದ್ದಾರೆ. 16 ಅಭ್ಯರ್ಥಿಗಳ ವಿರುದ್ಧ ದ್ವೇಷ ಭಾಷಣ ಮಾಡಿರುವ ಪ್ರಕರಣ ದಾಖಲಾಗಿದೆ.
ಬಿಜೆಪಿಯ 57 ಅಭ್ಯರ್ಥಿಗಳ ಪೈಕಿ 25 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದರೆ 57 ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ 18 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಎಸ್ ಪಿಯ 54 ಅಭ್ಯರ್ಥಿಗಳ ಪೈಕಿ 11 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದರೆ, 345 ಪಕ್ಷೇತರ ಅಭ್ಯರ್ಥಿಗಳ ಪೈಕಿ 60 ಅಭ್ಯರ್ಥಿಗಳು ಪ್ರಕರಣ ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲೋಕಸಭಾ ಚುನಾವಣೆcriminal casesಕ್ರಿಮಿನಲ್ ಪ್ರಕರಣCandidatesಅಭ್ಯರ್ಥಿಗಳುLok Sabha Elections 20194th phase4 ನೇ ಹಂತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


