ದೇಶ

40, 20, 8 ಸೀಟುಗಳಲ್ಲಿ ಸ್ಪರ್ಧಿಸುತ್ತಿರುವವರೆಲ್ಲ ಪ್ರಧಾನಿಯಾಗಲು ಕ್ಯೂ ನಿಂತಿದ್ದಾರೆ: ಮೋದಿ

ಪ್ರಾದೇಶಿಕ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ 40, 20 ಹಾಗೂ ಕರ್ನಾಟಕದಲ್ಲಿ ಬರೀ ಎಂಟು ಕ್ಷೇತ್ರಗಳಲ್ಲಿ....

Published On :
ದರ್ಭಾಂಗ: ಪ್ರಾದೇಶಿಕ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ 40, 20 ಹಾಗೂ ಕರ್ನಾಟಕದಲ್ಲಿ ಬರೀ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ(ಜೆಡಿಎಸ್)ವರು ಸಹ ದೇಶದ ಪ್ರಧಾನಿಯಾಗಲು ಕ್ಯೂ ನಿಂತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇಂದು ಉತ್ತರ ಬಿಹಾರದ ದರ್ಭಾಂಗನಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 40, 20, 8 ಸೀಟುಗಳಲ್ಲಿ ಸ್ಪರ್ಧಿಸುವ ಈ ಜನರಿಂದ ಭಯೋತ್ಪಾದನೆ ವಿರುದ್ಧ ಹೋರಾಡಲು ಸಾಧ್ಯವೆ? ಆದರೆ ನಿಮ್ಮ ಚೌಕಿದಾರ್ ಉಗ್ರರ ವಿರುದ್ಧ ಹೋರಾಡುತ್ತಾರೆ. ಅದಕ್ಕೆ ನಿಮ್ಮ ಮತದ ಬೆಂಬಲ ಬೇಕು ಎಂದರು.
ನೀವು ದೇಶದ ಯಾವುದೇ ಭಾಗದಲ್ಲಿ ಬಿಜೆಪಿ ಅಥವಾ ಅದರ ಮಿತ್ರ ಪಕ್ಷಕ್ಕೆ ಮತ ಹಾಕಿದರೆ ಅದು ನೇರವಾಗಿ ಚೌಕಿದಾರನಿಗೆ ಹೋಗುತ್ತದೆ ಎಂದು ಪ್ರಧಾನಿ ಹೇಳಿದರು.
ಭಯೋತ್ಪಾದನೆಯನ್ನು ಬುಡ ಸಮೇತ ಕಿತ್ತುಹಾಕುವುದು ನಮ್ಮ ಉದ್ದೇಶ ಎಂದು ಬಿಜೆಪಿ ಸರ್ಕಾರ ರಾಷ್ಟ್ರೀಯ ಭದ್ರತೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.