ಲೋಕಸಭಾ ಚುನಾವಣೆ: ವಾರಣಾಸಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ
ದೇವಾಲಯಗಳ ನಾಡು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.

Published On :
ಉತ್ತರ ಪ್ರದೇಶ: ದೇವಾಲಯಗಳ ನಾಡು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಎರಡನೇ ಅವಧಿಗೆ ಆಯ್ಕೆ ಬಯಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನರೇಂದ್ರ ಮೋದಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಮೋದಿ ಅವರ ನಾಮಪತ್ರಕ್ಕೆ ಸೂಚಕರಾಗಿ ವಿವಿಧ ಕ್ಷೇತ್ರಗಳ ನಾಲ್ವರು ಸಹಿ ಹಾಕಿದರು. ಸ್ಥಳೀಯ ನಿವಾಸಿಗಳಾದ ಮದನ್ ಮೋಹನ್ ಮಾಳವಿಯಾ ಮೊಮ್ಮಗಳು ಡಾ. ಅನ್ನಪೂರ್ಣ ಶುಕ್ಲಾ, ರಮಾಶಂಕರ್ ಪಟೇಲ್ ಸುಭಾಷ್, ಚಂದ್ರಗುಪ್ತಾ, ಜಗದೀಶ್ ಚೌದರಿ ಅವರು ಮೋದಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದರು. ನಾಮ ಪತ್ರ ಸಲ್ಲಿಕೆ ವೇಳೆ ಮೋದಿ ಚೌಕಿದಾರ್ ಎಂದು ಅನುಮೋದನೆ ಮಾಡಿದ್ದಾರೆ.
ಮೋದಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದ ಮದನ್ ಮೋಹನ್ ಮಾಳವಿಯಾ ಅವರ ಮೊಮ್ಮಗಳು ಡಾ. ಅನ್ನಪೂರ್ಣ ಶುಕ್ಲಾ ಅವರ ಕಾಲಿಗೆ ನಮಸ್ಕರಿಸಿ ಪ್ರಧಾನಿ ಮೋದಿ ವಂದನೆ ತಿಳಿಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎನ್ ಡಿಎ ನಾಯಕರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು. ಹಿರಿಯ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ನಿತೀಶ್ ಕುಮಾರ್, ರಾಮ್ ವಿಲಾಸ್ ಪಾಸ್ವನ್ , ಉದ್ದವ್ ಠಾಕ್ರೆ ಮತ್ತಿತರ ನಾಯಕರು ನರೇಂದ್ರ ಮೋದಿಗೆ ಶಾಲು ಹೂದಿಸಿ, ಹೂ ಗುಚ್ಛ ನೀಡುವ ಮೂಲಕ ಶುಭ ಕೋರಿದರು.
ವಾರಣಾಸಿಯಲ್ಲಿರುವ ಕಾಲ ಬೈರವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ನರೇಂದ್ರ ಮೋದಿ ಜಿಲ್ಲಾಧಿಕಾರಿ ಕಚೇರಿಗೆ ತೆರೆಳಿದರು.ಈ ಸಂದರ್ಭ ಜನಪ್ರವಾಹವೇ ಹರಿದುಬಂದಿತ್ತು.
#WATCH: PM Narendra Modi files nomination from Varanasi parliamentary constituency. #LokSabhaElections2019 pic.twitter.com/ym9x2gCYYG
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
VaranasiPM Modiಪ್ರಧಾನಿ ಮೋದಿವಾರಣಾಸಿನಾಮಪತ್ರ ಸಲ್ಲಿಕೆLokSabhaElections2019Files Nomination ಲೋಕಸಭಾ ಚುನಾವಣೆ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


