ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ಮೋದಿ ಆಸ್ತಿಯಲ್ಲಿ ಶೇ. 52 ರಷ್ಟು ಏರಿಕೆ
ಕಳೆದ ಐದು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯಲ್ಲಿ ಶೇ. 52 ರಷ್ಟು ಏರಿಕೆಯಾಗಿದೆ. ನಾಮಪತ್ರ ಜೊತೆಗೆ ಸಲ್ಲಿಸಲಾಗಿರುವ ಆಸ್ತಿ ವಿವರದ ಪ್ರಮಾಣ ಪತ್ರದಲ್ಲಿ...

ವಾರಣಾಸಿ: ಕಳೆದ ಐದು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯಲ್ಲಿ ಶೇ. 52 ರಷ್ಟು ಏರಿಕೆಯಾಗಿದೆ.ನಾಮಪತ್ರ ಜೊತೆಗೆ ಸಲ್ಲಿಸಲಾಗಿರುವ ಆಸ್ತಿ ವಿವರದ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಇದನ್ನು ಘೋಷಿಸಿಕೊಂಡಿದ್ದಾರೆ.
ನರೇಂದ್ರ ಮೋದಿ ಅವರ ಒಟ್ಟಾರೇ ಆಸ್ತಿ ಮೌಲ್ಯ 2. 51 ಕೋಟಿ ರೂಪಾಯಿ ಆಗಿದೆ. ಇದರಲ್ಲಿ 1. 41 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದರೆ, 1. 10 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1. 27 ಕೋಟಿ ರೂ. ಮೊತ್ತವನ್ನು ಭದ್ರತಾ ಠೇವಣಿಯನ್ನಾಗಿಟ್ಟಿದ್ದಾರೆ.
2014ಕ್ಕೆ ಹೋಲಿಸಿದರೆ ಈ ಬಾರಿ ಚರಾಸ್ತಿ ಪ್ರಮಾಣದಲ್ಲಿ ಶೇ, 114.15 ರಷ್ಟು ಹೆಚ್ಚಳವಾಗಿದ್ದು, 65 ಲಕ್ಷದ 91 ಸಾವಿರದ 582 ರೂ. ಮೊತ್ತದ ಚರಾಸ್ತಿಯನ್ನು ಪ್ರಧಾನಿ ಹೊಂದಿದ್ದಾರೆ .
ಸರ್ಕಾರದಿಂದ ಬರುವ ವೇತನವೇ ನರೇಂದ್ರ ಮೋದಿ ಅವರ ಪ್ರಾಥಮಿಕ ಆದಾಯದ ಮೂಲವಾಗಿದ್ದು, ಉಳಿತಾಯದ ಮೇಲೆ ಬಡ್ಡಿ ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೇ ಯಾವುದೇ ಕ್ರಿಮಿನಲ್ ಆರೋಪವನ್ನು ಎದುರಿಸುತ್ತಿಲ್ಲ ಎಂದು ಅಫಿಡವಿಟ್ ನಲ್ಲಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ 38, ಸಾವಿರದ 750 ರೂಪಾಯಿ ನಗದನ್ನು ಹೊಂದಿದ್ದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1. 27 ಕೋಟಿ ರೂ. ಮೊತ್ತದ ಭದ್ರತಾ ಠೇವಣಿಯನ್ನಿಟ್ಟಿದ್ದಾರೆ. 2014ರಲ್ಲಿ ಮೋದಿ 32 ಸಾವಿರದ 700 ರೂಪಾಯಿ ನಗದು, 26. 05 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ,ಹಾಗೂ 32. 48 ಲಕ್ಷವನ್ನು ಭದ್ರತಾ ಠೇವಣಿಯನ್ನಾಗಿ ಇಟ್ಟಿರುವುದಾಗಿ ಘೋಷಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


