'ಚೌಕಿದಾರ್ ಚೋರ್ ಹೈ' ಘೋಷಣೆ: ರಾಹುಲ್, ತೇಜಸ್ವಿ ವಿರುದ್ಧ ಕೇಸ್ ದಾಖಲು
'ಚೌಕಿದಾರ್ ಚೋರ್ ಹೈ' ಎಂದು ಸತತವಾಗಿ ಘೋಷಣೆ ಕೂಗುವಂತೆ ಜನಸಮೂಹವನ್ನು ಪ್ರೇರೇಪಿಸಿದ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ....

Published On :
ಅರಾ: 'ಚೌಕಿದಾರ್ ಚೋರ್ ಹೈ' ಎಂದು ಸತತವಾಗಿ ಘೋಷಣೆ ಕೂಗುವಂತೆ ಜನಸಮೂಹವನ್ನು ಪ್ರೇರೇಪಿಸಿದ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ವಿರುದ್ಧ ಬಿಹಾರದಲ್ಲಿ ಕೇಸ್ ದಾಖಲಿಸಲಾಗಿದೆ.
ನಿನ್ನೆ ಬಿಹಾರದ ಸಮಷ್ಟಿಪುರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರ ಭಾಷಣದ ನಡುವೆ ಚೌಕಿದಾರ್ ಪದವನ್ನು ಹಲವು ಬಾರಿ ಬಳಸಿದ್ದರು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿ ವಕೀಲರೊಬ್ಬರು ಅರಾ ಸಿವಿಲ್ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದಾರೆ.
ರಾಹುಲ್ ಗಾಂಧಿ 'ಚೌಕಿದಾರ್ ಚೋರ್ ಹೈ' ಎಂದು ಘೋಷಣೆ ಕೂಗಿದ್ದಲ್ಲದೆ ಅದನ್ನು ಪದೇ ಪದೇ ಹೇಳುವಂತೆ ಅಲ್ಲಿ ನೆರೆದಿದ್ದ ಜನಸಮೂಹಕ್ಕೂ ಸೂಚಿಸಿದ್ದರು. ಈ ವೇಳೆ ತೇಜಸ್ವಿ ಯಾದವ್ ಕೂಡ ಹಾಜರಿದ್ದರು ಎಂದು ವಕೀಲರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


