ದೇಶ

ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 50 ಸೀಟುಗಳನ್ನು ಸಹ ಗೆಲ್ಲದಿರಬಹುದು: ಪ್ರಧಾನಿ ಮೋದಿ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 50 ಸೀಟುಗಳು ಸಹ ಸಿಗುವುದಿಲ್ಲ ಎಂದು ಪ್ರಧಾನ ...

ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 50 ಸೀಟುಗಳನ್ನು ಸಹ ಗೆಲ್ಲದಿರಬಹುದು: ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :
ಮುಂಬೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 50 ಸೀಟುಗಳು ಸಹ ಸಿಗುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಬೈಯ ಬಿಕೆಸಿ ಮೈದಾನದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಜೊತೆ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬದಲಿ ಸರ್ಕಾರವನ್ನು ಜನರು ಬಯಸುತ್ತಿಲ್ಲ, ಬದಲಿಗೆ ದೇಶದಲ್ಲಿ ನಿರ್ಣಾಯಕ, ಬಡವರ ಏಳಿಗೆಗೆ ಶ್ರಮಿಸುವ ಮತ್ತು ಭಯೋತ್ಪಾದನೆಯನ್ನು ಕೊನೆಗಾಣಿಸುವ ದಿಟ್ಟ ನಿರ್ಧಾರ ಕೈಗೊಳ್ಳಲು ಎನ್ ಡಿಎ ಮೈತ್ರಿಕೂಟದ ಮೇಲೆ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬರುತ್ತದೆ ಎಂದು ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿವೆ. ಎಷ್ಟು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂಬುದಿರುವುದು ಎಂದು ಮೋದಿ ಹೇಳಿದರು.
ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವಕ-ಯುವತಿಯರು ಮತ್ತು 20ನೇ ಶತಮಾನದ ಕೊನೆ ಭಾಗದಲ್ಲಿ ಹುಟ್ಟಿದವರು ಮೋದಿಯವರನ್ನು ಏಕೆ ಬೆಂಬಲಿಸುತ್ತಾರೆ ಎಂದು ವಿರೋಧ ಪಕ್ಷದವರು ಅಚ್ಚರಿಪಡುತ್ತಿದ್ದಾರೆ. ಅವರ ಆಸೆ-ಆಕಾಂಕ್ಷೆಗಳಿಗೆ ಮೋದಿಯವರು ಭಾವನೆಗಳನ್ನು ತುಂಬುವುದೇ ಅದಕ್ಕೆ ಕಾರಣವಾಗಿದೆ. ಇವರೆಲ್ಲ 2047ರಲ್ಲಿ ಭಾರತ ಸ್ವಾತಂತ್ರ್ಯದ ಶತಮಾನೋತ್ಸವ ಆಚರಣೆಯನ್ನು ಇದಿರು ನೋಡುತ್ತಿದ್ದಾರೆ. ಆದರೆ ಕೆಲವರು ಇನ್ನೂ 20ನೇ ಶತಮಾನದಲ್ಲಿದ್ದಾರೆ. ಇಂದಿನ ಯುವಜನತೆ ಏನನ್ನು ಬಯಸುತ್ತಾರೆ, ಅವರ ನಿರೀಕ್ಷೆಗಳೇನು ಎಂದು ಅರ್ಥವಾಗುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.