ದೇಶ

ಇವಿಎಂನಲ್ಲಿ ಪಕ್ಷದ ಚಿಹ್ನೆ ಮುಂದೆ ಬಿಜೆಪಿ ಹೆಸರು; ವಿರೋಧ ಪಕ್ಷಗಳ ಆರೋಪ ನಿರಾಕರಿಸಿದ ಚು.ಆ

ಪಶ್ಚಿಮ ಬಂಗಾಳದ ಬರ್ರಕ್ ಪೊರ ಕ್ಷೇತ್ರದಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ ...

ಇವಿಎಂನಲ್ಲಿ ಪಕ್ಷದ ಚಿಹ್ನೆ ಮುಂದೆ ಬಿಜೆಪಿ ಹೆಸರು; ವಿರೋಧ ಪಕ್ಷಗಳ ಆರೋಪ ನಿರಾಕರಿಸಿದ ಚು.ಆ
ಚುನಾವಣಾ ಆಯೋಗ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ದಿನೇಶ್ ತ್ರಿವೇದಿ
Published On :
ನವದೆಹಲಿ: ಪಶ್ಚಿಮ ಬಂಗಾಳದ ಬರ್ರಕ್ ಪೊರ ಕ್ಷೇತ್ರದಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಯ ಮುಂದೆ ಮಾತ್ರ ಪಕ್ಷದ ಹೆಸರನ್ನು ಪ್ರದರ್ಶಿಸಲಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಆದರೆ 2013ರಿಂದಲೂ ಇದೇ ರೀತಿ ಚುನಾವಣಾ ಆಯೋಗ ಅನುಸರಿಸಿಕೊಂಡು ಬಂದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಾಂಗ್ರೆಸ್ ನ ಹಿರಿಯ ಮುಖಂಡ ಅಭಿಷೇಕ್ ಮನು ಸಿಂಘ್ವಿ, ಅಹ್ಮದ್ ಪಟೇಲ್, ತೃಣಮೂಲ ಕಾಂಗ್ರೆಸ್ ನ ದಿನೇಶ್ ತ್ರಿವೇದಿ ಮತ್ತು ಡೆರೆಕ್ ಒ ಬ್ರಿಯನ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೊರಾ ಅವರನ್ನು ಭೇಟಿ ಮಾಡಿ ಇಂತಹ ವಿದ್ಯುನ್ಮಾನ ಮತಯಂತ್ರಗಳನ್ನು ಉಳಿದ ಹಂತಗಳಲ್ಲಿ ತೆಗೆದುಹಾಕಬೇಕು ಅಥವಾ ಪಕ್ಷಗಳ ಹೆಸರುಗಳನ್ನು ವಿದ್ಯುನ್ಮಾನ ಮತಯಂತ್ರಗಳಲ್ಲಿ ಪಕ್ಷಗಳ ಚಿಹ್ನೆಯ ಮುಂದೆ ಸೇರಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.