ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮತ್ತೆ ಸ್ಮೃತಿ ಇರಾನಿ ಅದೃಷ್ಟ ಪರೀಕ್ಷೆ!
ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತತ ಎರಡನೇ ಬಾರಿಗೆ ಅಮೇಥಿಯಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

Published On :
ಅಮೇಥಿ: ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತತ ಎರಡನೇ ಬಾರಿಗೆ ಅಮೇಥಿಯಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.
ಹೌದು.. 2014ರ ಚುನಾವಣೆಯಂತೆಯೇ ಈ ಬಾರಿಯ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅಮೇಥಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಸೆಣಸುತ್ತಿದ್ದಾರೆ. ಕಳೆದ ಬಾರಿ ಅವರು ಇದೇ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸೋಲನ್ನಪ್ಪಿದ್ದರು.
ಉತ್ತರ ಪ್ರದೇಶದ ಅಮೇಥಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸ್ವಕ್ಷೇತ್ರವಾಗಿದ್ದು, ಕಳೆದ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಮೃತಿ ಇರಾನಿ ಅವರು ಸ್ಪರ್ಧಿಸಿ ರಾಹುಲ್ ಗಾಂಧಿ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು. ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ ಈ ಬಾರಿಯೂ ಸಹ ಸ್ಮೃತಿ ಅವರಿಗೆ ಇದೇ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ರಾಹುಲ್ ಗಾಂಧಿ ಅವರನ್ನು ಕಟ್ಟಿಹಾಕುವ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಸ್ಮೃತಿ ಅವರು ರಾಹುಲ್ ಗಾಂಧಿ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನ್ನಪ್ಪಿದ್ದರು.
ಬಿಜೆಪಿ ಬಿಡುಗಡೆ ಮಾಡಿರುವ 188 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಅದರಲ್ಲಿ ನರೇಂದ್ರ ಮೋದಿ ಈ ಹಿಂದಿನಂತೆಯೇ ಈ ಬಾರಿಯೂ ವಾರಣಾಸಿಯಿಂದಲೇ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಅವರ ಗಾಂಧಿನಗರ ಕ್ಷೇತ್ರವನ್ನು ಈ ಬಾರಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ನೀಡಲಾಗಿದೆ. ಆ ಮೂಲಕ ಎಲ್ ಕೆ ಅಡ್ವಾಣಿ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗುತ್ತದೆ ಎಂಬ ಭರವಸೆ ಹುಸಿಯಾಗಿದೆ.
ಇನ್ನು ಬಿಜೆಪಿ ಟಿಕೆಟ್ ಬಗ್ಗೆ ಭಾರಿ ವಿವಾದ ಎಬ್ಬಿಸಿದ್ದ ಸಾಕ್ಷಿ ಮಹಾರಾಜ್ ಅವರಿಗೆ ಟಿಕೆಟ್ ನೀಡಲಾಗಿರುವುದು ಗಮನಾರ್ಹ. ಸಾಕ್ಷಿ ಮಹಾರಾಜ್ ಅವರು ವಿವಾದಿತ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಯು ವಿರೋಧ ಪಕ್ಷಗಳ ಟೀಕೆಗಳಿಗೆ ತುತ್ತಾಗುವಂತೆ ಮಾಡಿದ್ದರೂ, ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಊಹಿಸಲಾಗಿತ್ತು. ಆದರೆ ಅವರಿಗೆ ಟಿಕೆಟ್ ನೀಡಲಾಗಿದೆ. ನರೇಂದ್ರ ಮೋದಿ ಅವರು ಕಳೆದ ಬಾರಿ ಚುನಾವಣೆಗೆ ಸ್ಪರ್ಧಿಸಿ ಭಾರಿ ಅಂತರದಿಂದ ಜಯಗಳಿಸಿದ್ದ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSmriti Iraniಸ್ಮೃತಿ ಇರಾನಿRahul Gandhiರಾಹುಲ್ ಗಾಂಧಿಅಮೇಥಿAmethiಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


