ಇದು ನಾಮ್ದಾರ್ ವರ್ಸಸ್ ಕಾಮ್ದಾರ್ ನಡುವಿನ ಹೋರಾಟ: ಸ್ಮತಿ ಇರಾನಿ
ಅಮೇಥಿಯಲ್ಲಿ ರಾಹುಲ್ ಗಾಂಧಿ, ಸ್ಮೃತಿ ಇರಾನಿ ನಡುವಿನ ಸೆಕೆಂಡ್ ರೌಂಡ್ ಸಮರಕ್ಕೆ ವೇದಿಕೆ ಸಿದ್ದವಾಗಿದ್ದು, ಆತ್ತ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ಆರಂಭಿಸಿದ್ದಾರೆ.

Published On :
ನವದೆಹಲಿ: ಅಮೇಥಿಯಲ್ಲಿ ರಾಹುಲ್ ಗಾಂಧಿ, ಸ್ಮೃತಿ ಇರಾನಿ ನಡುವಿನ ಸೆಕೆಂಡ್ ರೌಂಡ್ ಸಮರಕ್ಕೆ ವೇದಿಕೆ ಸಿದ್ದವಾಗಿದ್ದು, ಆತ್ತ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ಆರಂಭಿಸಿದ್ದಾರೆ.
ಕಳೆದ 2014ರ ಲೋಕಸಭಾ ಚುನಾವಣೆಯಂತೆಯೇ ಈ ಬಾರಿಯೂ ಅಮೇಥಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿ ಸ್ಮೃತಿ ಇರಾನಿ ಅವರನ್ನು ಕಣಕ್ಕಳಿಸಿದೆ. ಕಳೆದ ಚುನಾವಣೆಯಲ್ಲಿ ಸ್ಮೃತಿ ಅವರು ರಾಹುಲ್ ಗಾಂಧಿ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನ್ನಪ್ಪಿದ್ದರು.
ಇದೀಗ ಮತ್ತೆ ಅಮೇಥಿಯಲ್ಲಿ ರಾಹುಲ್ ವರ್ಸಸ್ ಸ್ಮೃತಿ ಇರಾನಿ ನಡುವಿನ ಸೆಕೆಂಡ್ ರೌಂಡ್ ಸಮರಕ್ಕೆ ವೇದಿಕೆ ಸಜ್ಜಾಗಿದೆ. ಅತ್ತ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಇತ್ತ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಇದು ಕಾಮ್ದಾರ್ ವರ್ಸಸ್ ನಾಮ್ದಾರ್ (ಕೆಲಸ ಮಾಡುವವರು, ಕೆಲಸ ಮಾಡದೆಯೇ ಹೆಸರು ಪಡೆಯುವ)ನಡುವಿನ ಹೋರಾಟವಾಗಿದೆ. ಕಳೆದ ಐದು ವರ್ಷಗಳಲ್ಲಿ ರಾಹುಲ್ ಗಾಂಧಿ ಅದೆಷ್ಟು ಬಾರಿ ಅಮೇಥಿಗೆ ಬಂದು ಜನರ ಕಷ್ಟ-ಸುಖ ಆಲಿಸಿದ್ದಾರೆ ಎಂದು ಇರಾನಿ ಪ್ರಶ್ನಿಸಿದ್ದಾರೆ. ಅಂತೆಯೇ ತಾವು ನಾನು ಸಾಕಷ್ಚು ಬಾರಿ ಕ್ಷೇತ್ರಕ್ಕೆ ತೆರಳಿ ಅಲ್ಲಿನ ಜನರೊಂದಿಗೆ ಮಾತನಾಡಿದ್ದೇನೆ ಮತ್ತು ಅವರ ಆಶೋತ್ತರಗಳಿಗೆ ಸ್ಪಂದಿಸಿದ್ದೇನೆ. ನನ್ನ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಕಷ್ಟು ಸಮಯವನ್ನು ಅಮೇಥಿಯಲ್ಲಿ ಕಳೆದಿದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಶೀಘ್ರ ತಾನು ಅಮೇಥಿಗೆ ತೆರಳಿ ಪ್ರಚಾರ ಕಾರ್ಯ ಆರಂಭಿಸುತ್ತೇನೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSmriti Iraniಸ್ಮೃತಿ ಇರಾನಿRahul Gandhiರಾಹುಲ್ ಗಾಂಧಿಅಮೇಥಿAmethiಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


