ಲೋಕಸಭಾ ಚುನಾವಣೆ:ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಅನಂತ್ ನಾಗ್ ಕ್ಷೇತ್ರದಿಂದ ಸ್ಪರ್ಧೆ
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬ ಫ್ತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

Published On :
ಶ್ರೀನಗರ: ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬ ಫ್ತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಇದೇ ವೇಳೆ ರಾಜ್ಯದ ಉಧಂಪುರ್ ಹಾಗೂ ಜಮ್ಮು ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದೆಂದು ಪಕ್ಷ ನಿರ್ಧಾರ ತೆಗೆದುಕೊಂಡಿದೆ.
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮುಂಬರುವ ಸಂಸದೀಯ ಚುನಾವಣೆಯಲ್ಲಿ ದಕ್ಷಿಣ ಕಾಶ್ಮೀರ ಭಾಗದಿಂದ ಸ್ಪರ್ಧಿಸುತ್ತಿರುವುದಾಗಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಮುಫ್ತಿ ಈ ಹಿಂದೆ 2004 ರಿಂದ 2009 ಮತ್ತು 2014 ರಿಂದ 2018 ಎರಡು ಅವಧಿಯಲ್ಲಿ ಇದೇ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಇನ್ನು ಬಾರಾಮುಲ್ಲಾ ಕ್ಷೇತ್ರದಿಂದ ಪಕ್ಷವು ಕಯೂಮ್ ವಾನಿ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದು ರಾಜ್ಯದ ಆರು ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಪ್ರಕಟಣೆ ಹೇಳಿದೆ. ಅಲ್ಲದೆ ಕಾಂಗ್ರೆಸ್ ಜತೆ ಚುನಾವಣಾಪೂರ್ವ ಮೈತ್ರಿ ಕುರಿತ ಎಲ್ಲಾ ಊಹಾಪೋಹವನ್ನು ಪಿಡಿಪಿ ತಳ್ಳಿ ಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


