ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 9ನೇ ಪಟ್ಟಿ: ತಮಿಳುನಾಡಿನ ಶಿವಗಂಗಾದಿಂದ ಕಾರ್ತಿ ಚಿದಂಬರಂ ಕಣಕ್ಕೆ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಒಂಬತ್ತನೇ ಪಟ್ಟಿ ಬಿಡುಗಡೆಯಾಗಿದೆ.ಈ ಪಟ್ಟಿಯಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ, ಐಎನ್ಎಕ್ಸ್ ಮೀಡಿಯಾ ಅವ್ಯವಹಾ...

Published On :
ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಒಂಬತ್ತನೇ ಪಟ್ಟಿ ಬಿಡುಗಡೆಯಾಗಿದೆ.ಈ ಪಟ್ಟಿಯಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ, ಐಎನ್ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಆಪಾದಿತರಾಗಿರುವ ಕಾರ್ತಿ ಚಿದಂಬರಂ ಹೆಸರು ಅಚ್ಚರಿಯ ಸೇರ್ಪಡೆಯಾಗಿದೆ.
ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾದಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ.
ಕಾರ್ತಿ ಚಿದಂಬರಂ ಅವರು ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಸೇರಿ ಅನೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ
ಇನ್ನು ಕಾಂಗ್ರೆಸ್ ಪಟ್ಟಿಯಲ್ಲಿ ಮಹಾರಾಷ್ಟ್ರ, ಬಿಹಾರದ ಮೂವರು ಅಭ್ಯರ್ಥಿಗಳು, ತಮಿಳುನಾಡು, ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರದ ಒಬ್ಬೊಬ್ಬ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಮಾಜಿ ಎಮ್ ಸಿಪಿ ನಾಯಕ ತಾರಿಕ್ ಅನ್ವರ್ ಅವರು ಬಿಹಾರದ ಕತಿಹಾರ್ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾದರೆ ಮಾಜಿ ಪ್ರಧಾನ ಕಾರ್ಯದರ್ಶಿ ಬಿ. ಕೆ. ಹರಿಪ್ರಸಾದ್ ಕರ್ನಾಟಕದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsP Chidambaramಪಿ. ಚಿದಂಬರಂಕಾರ್ತಿ ಚಿದಂಬರಂKarti ChidambaramLok Sabha Elections 2019ಲೋಕಸಭಾ ಚುನಾವಣೆ 2019
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


