ಹರ್ಯಾಣ: ಖ್ಯಾತ ಸಿಂಗರ್ ಸಪ್ನಾ ಚೌದರಿ ಕಾಂಗ್ರೆಸ್ ಗೆ ಸೇರ್ಪಡೆ
ಹರ್ಯಾಣದ ಖ್ಯಾತ ಹಾಡುಗಾರ್ತಿ ಹಾಗೂ ನೃತ್ಯಗಾರ್ತಿ ಮತ್ತು ನಟಿ ಸಪ್ನಾ ಚೌದರಿ ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Published On :
ನವದೆಹಲಿ: ಹರ್ಯಾಣದ ಖ್ಯಾತ ಹಾಡುಗಾರ್ತಿ ಹಾಗೂ ನೃತ್ಯಗಾರ್ತಿ ಮತ್ತು ನಟಿ ಸಪ್ನಾ ಚೌದರಿ ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಹಿಂದೆ ಹಿಂದಿ ಬಿಗ್ ಬಾಸ್ ರಿಯಾಲಿಟಿ ಷೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗೆ ಗ್ರಾಸವಾಗಿದ್ದ ಸಪ್ನಾ ಚೌದರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮೂಲಗಳ ಪ್ರಕಾರ ಸಪ್ನಾ ಚೌದರಿ ಅವರನ್ನು ಕಾಂಗ್ರೆಸ್ ಪಕ್ಷ ಉತ್ತರ ಪ್ರದೇಶದ ಮಥುರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿಸುವ ಸಾಧ್ಯತೆ ಇದೆ. ಇನ್ನು ಮಥುರಾದಲ್ಲಿ ಬಿಜೆಪಿ ಸಂಸದೆ ಹಾಗೂ ಖ್ಯಾತ ಬಾಲಿವುಡ್ ನಟಿ ಹೇಮಾಮಾಲಿನಿ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.
ಈ ಹಿಂದೆ ವೈಯುಕ್ತಿಕ ಕಾರಣಗಳಿಂದಾಗಿ ಇದೇ ನಟಿ ಸಪ್ನಾ ಚೌದರಿ ಆತ್ಮಹತ್ಯೆಗೆ ಪ್ರಯತ್ನಸಿ ಸುದ್ದಿಗೆ ಗ್ರಾಸವಾಗಿದ್ದರು. ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiSapna Chaudharyಲೋಕಸಭಾ ಚುನಾವಣೆ 2019Lokasabha Election 2019ಸಪ್ನಾ ಚೌದರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


