ಪ್ರಿಯಾಂಕ ಗಾಂಧಿ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಗೆ ಹೆಚ್ಚಿನ ಬಲ- ಶಶಿ ತರೂರ್
ಉತ್ತರ ಪ್ರದೇಶ ಪ್ರಿಯಾಂಕ ಗಾಂಧಿ ವಾದ್ರ ಅವರ ಕರ್ಮ ಭೂಮಿ. ಅವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್‌ಗೆ ಲಾಭವಾಗಿದೆ.ಪ್ರಿಯಾಂಕ ಗಾಂಧಿ ಪ್ರಭಾವದಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಬಂದಂತಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ತಿರುವನಂತಪುರ: ಉತ್ತರ ಪ್ರದೇಶ ಪ್ರಿಯಾಂಕ ಗಾಂಧಿ ವಾದ್ರ ಅವರ ಕರ್ಮ ಭೂಮಿ. ಅವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್‌ಗೆ ಲಾಭವಾಗಿದೆ.ಪ್ರಿಯಾಂಕಾ ಗಾಂಧಿ ಪ್ರಭಾವದಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಬಂದಂತಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ.
47 ವರ್ಷದ ಪ್ರಿಯಾಂಕ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೂರ್ವ ಭಾಗದ ಎಐಸಿಸಿ ಪ್ರದಾನ ಕಾರ್ಯದರ್ಶಿಯಾಗಿ ಈ ವರ್ಷ ಜನವರಿ 23ರಂದು ನೇಮಕ ಮಾಡಲಾಯಿತು. ಪ್ರಿಯಾಂಕ ಗಾಂಧಿ ರಾಜಕೀಯ ಪ್ರವೇಶದಿಂದ 80 ಲೋಕಸಭೆ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶ ರಾಜ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗಿದೆ.
ಪ್ರಿಯಾಂಕ ಗಾಂಧಿ ಪ್ರಭಾವಿ ನಾಯಕಿ.ತುಂಬ ಚೆನ್ನಾಗಿ ಮಾತನಾಡುತ್ತಾರೆ. ಬಹಳ ಆತ್ಮವಿಶ್ವಾಸದಿಂದ ಮಾತನಾಡುತ್ತಾರೆ. ಸರಳವಾದ ಹಿಂದಿಯಲ್ಲಿ ಮಾತನಾಡುತ್ತಾರೆ. ಸಾರ್ವಜನಿಕ ಸ್ಥಾಳಗಳಲ್ಲಿ ಪ್ರಿಯಾಂಕ ವಿಚಲಿತರಾಗುವುದಿಲ್ಲ.ಹೆಚ್ಚಿನ ಮಂದಿ ಪ್ರಿಯಾಂಕ ಅವರಲ್ಲಿ ಅವರ ಅಜ್ಜಿಯನ್ನು ಕಾಣುತ್ತಾರೆ ಎಂದು ಪ್ರಿಯಾಂಕ ಗಾಂಧಿ ಅವರ ರಾಜಕೀಯ ಪ್ರವೇಶದ ಬಗ್ಗೆ ಶಶಿ ತರೂರ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಪ್ರಿಯಾಂಕ ಗಾಂಧಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದೆ ಅವರು ಪ್ರಬಲ ನಾಯಕಿಯಾಗಿ ಹೊರಹೊಮ್ಮಲಿದ್ದಾರೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಶಶಿ ತರೂರ್ ಹೇಳಿದ್ದಾರೆ.
ಪ್ರತಿಯೊಂದು ರಾಜ್ಯಗಳಲ್ಲೂ ವಿಭಿನ್ನ ಸಿದ್ಧಾಂತ, ತತ್ವಗಳನ್ನು ಹೊಂದಿದ್ದು, ಕೆಲವು ರಾಜ್ಯಗಳಲ್ಲಿ ಕೆಲ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಸಿಪಿಐ (ಎಂ) ಜೊತೆಗೆ ಮೈತ್ರಿ ಮಾಡಿಕೊಂಡಿರುವುದರಲ್ಲಿ ಯಾವುದೇ ತಪ್ಪಿಲ್ಲ.ಆದರೆ, ಕೇರಳ ರಾಜಕೀಯಕ್ಕೂ ಬಂಗಾಳ ರಾಜಕೀಯಕ್ಕೂ ವ್ಯತ್ಯಾಸ ಇರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


