ದೇಶ

ರಾಹುಲ್ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ: ಮಮತಾ ಬ್ಯಾನರ್ಜಿ

ರಾಹುಲ್ ಗಾಂಧಿ ಇನ್ನೂ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಹುಲ್ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ: ಮಮತಾ ಬ್ಯಾನರ್ಜಿ
ಸಂಗ್ರಹ ಚಿತ್ರ
Published On :
ಕೋಲ್ಕತಾ: ರಾಹುಲ್ ಗಾಂಧಿ ಇನ್ನೂ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಹಿಂದೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚುನಾವಣೆ ರ‍್ಯಾಲಿ ನಡೆಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಸಿಎಂ ಮಮತಾ ಬ್ಯಾನರ್ಜಿಯನ್ನು ಟೀಕೆ ಮಾಡಿದ್ದರು. ಪಶ್ಚಿಮ ಬಂಗಾಳದಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ್ದ ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ, 'ಒಂದು ಕಡೆ ಮೋದಿ ಜೀ ಸುಳ್ಳುಗಳನ್ನು ಹೇಳುತ್ತಿರುತ್ತಾರೆ ಹಾಗೂ ಮತ್ತೊಂದು ಕಡೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇವಲ ಭರವಸೆಗಳನ್ನು ನೀಡುತ್ತಿರುತ್ತಾರೆ. ಆದರೆ, ಅದ್ಯಾವುದೂ ನಡೆಯುವುದಿಲ್ಲ' ಎಂದು ಟೀಕೆ ಮಾಡಿದ್ದರು.
ಇದೀಗ ರಾಹುಲ್ ಗಾಂಧಿ ಟೀಕೆಗೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ, 'ಚಿಕ್ಕ ಹುಡುಗ ಏನೋ ಹೇಳಿದ್ದಾರೆ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.