ಮುಂಬಯಿ ಉತ್ತರ ಕ್ಷೇತ್ರದಿಂದ 'ರಂಗೀಲಾ' ಬೆಡಗಿ ಊರ್ಮಿಳಾ ಮಾತೋಂಡ್ಕರ್ ಸ್ಪರ್ಧೆ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮುಂಬಯಿ ಉತ್ತರ ...

Published On :
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಸೆಂಟ್ರಲ್ ಇಲೆಕ್ಷನ್ ಕಮಿಟಿಯ ಸಭೆಯಲ್ಲಿ ಊರ್ಮಿಳಾ ಅವರನ್ನು ಮುಂಬಯಿ ಉತ್ತರ ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂಬಯಿ ಉತ್ತರ ಕ್ಷೇತ್ರದಲ್ಲಿ ಮಾತೋಂಡ್ಕರ್ ಅವರು ಬಿಜೆಪಿಯ ಹಾಲಿ ಸಂಸದ ಗೋಪಾಲ್ ಶೆಟ್ಟಿ ವಿರುದ್ಧ ಸೆಣಸಲಿದ್ದಾರೆ. ರಾಹುಲ್ ಗಾಂಧಿ ಅವರ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದಾಗಿ ಊರ್ಮಿಳಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಲೋಕಸಭೆ ಚುನಾವಣೆUrmila Matondkarಊರ್ಮಿಳಾ ಮಾತೋಂಡ್ಕರ್Loksabha PollsMumbai Northಮುಂಬಯಿ ಉತ್ತರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


