ದೇಶ

ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಿಷ್ಟು!

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಸಿಪಿಐ (ಎಂ)ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಿಷ್ಟು!
ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಿಷ್ಟು!
Published On :
ತಿರುವನಂತಪುರಂ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಸಿಪಿಐ (ಎಂ)ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸುತ್ತಿದ್ದಾರೆ. ನಾವು ರಾಹುಲ್ ಗಾಂಧಿ ವಿರುದ್ಧ ಅಭ್ಯರ್ಥಿ ಹಾಕುತ್ತೇವೆ. ರಾಹುಲ್ ಗಾಂಧಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವ ಕ್ಷೇತ್ರದಿಂದ ಕಣಕ್ಕಿಳಿಯಬೇಕಿತ್ತು. ಆದರೆ ಈಗ ಅವರು ಎಡಪಕ್ಷಗಳ ವಿರುದ್ಧ ಸ್ಪರ್ಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 
ಸುರಕ್ಷತೆ ದೃಷ್ಟಿಯಿಂದ ಈ ಬಾರಿ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ದಿನಗಳಿಂದ ಸುದ್ದಿ ಕೇಳಿಬರುತ್ತಿತ್ತು. ರಾಹುಲ್ ಗಾಂಧಿಯವರನ್ನು ನಾವೆಲ್ಲರೂ ಒತ್ತಾಯಿಸಿದ್ದು ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.