ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ರದ್ದು!
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸಮಾಜವಾದಿ ಪಕ್ಷ(ಎಸ್ಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸಮಾಜವಾದಿ ಪಕ್ಷ(ಎಸ್ಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.
ತೇಜ್ ಬಹದ್ದೂರ್ ಭಾರತೀಯ ಸೇನೆಯಲ್ಲಿದ್ದಾಗ ಕಳಪೆ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ವೈರಲ್ ಆಗಿದ್ದು ಬಳಿಕ ಸೇನೆ ಅಶಿಸ್ತು ತೋರಿದ ಆರೋಪದ ಮೇಲೆ ತೇಜ್ ಬಹದ್ದೂರ್ ರನ್ನು ಸೇವೆಯಿಂದ ವಜಾ ಮಾಡಿತ್ತು.
ಇದಾದ ಬಳಿಕ ತೇಜ್ ಬಹದ್ದೂರ್ ತಾವು ಪ್ರಧಾನಿ ಮೋದಿ ವಿರುದ್ಧವಾಗಿ ವಾರಣಾಸಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು. ಬಳಿಕ ಸಮಾಜವಾದಿ ಪಕ್ಷ(ಎಸ್ಪಿ) ತೇಜ್ ಬಹದ್ದೂರ್ ಗೆ ಟಿಕೆಟ್ ನೀಡಿತ್ತು.
ತಮ್ಮ ನಾಮಪತ್ರದಲ್ಲಿ ತೇಜ್ ಬಹದ್ದೂರ್ ಕಳಪೆ ಆಹಾರದ ಕುರಿತು ನಮೂದಿಸಿದ್ದು ಈ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿVaranasiವಾರಣಾಸಿnominationಲೋಕಸಭೆ ಚುನಾವಣೆLok Sabha pollsನಾಮಪತ್ರTej Bahadur Yadavತೇಜ್ ಬಹದ್ದೂರ್ ಯಾದವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


