ನಾಳೆ ಐದನೇ ಹಂತದ ಚುನಾವಣೆ: ಸೋನಿಯಾ, ರಾಹುಲ್, ರಾಜನಾಥ್ ಮತ್ತಿತರರ ಭವಿಷ್ಯ ನಿರ್ಧಾರ
ದೇಶದ ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಗೃಹ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತಿತರ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ನವದೆಹಲಿ: ದೇಶದ ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಗೃಹ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತಿತರ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ , ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ ಐದು, ಜಾರ್ಖಂಡ್ ನಲ್ಲಿನ ನಾಲ್ಕು ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಕ್ಷೇತ್ರದಲ್ಲಿ ನಾಳೆ ಚುನಾವಣೆ ನಡೆಯಲಿದೆ
ಸುಮಾರು 8.75 ಕೋಟಿ ಮತದಾರರು ಮತ ಚಲಾಯಿಸಲು ಅರ್ಹತೆ ಹೊಂದಿದ್ದು, 674 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. 96 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


