ಲೋಕ ಸಮರ 2019: ಮತ್ತೆ ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್
ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳ ಪೈಕಿ ಮತ್ತೆ 2 ಪ್ರಕರಣಗಳಲ್ಲಿ ಪ್ರಧಾನಿ ಮೋದಿ ಅವರಿಗೆ ಕ್ಲೀನ್ ಚಿಟ್ ದೊರೆತಿದೆ.

Published On :
ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳ ಪೈಕಿ ಮತ್ತೆ 2 ಪ್ರಕರಣಗಳಲ್ಲಿ ಪ್ರಧಾನಿ ಮೋದಿ ಅವರಿಗೆ ಕ್ಲೀನ್ ಚಿಟ್ ದೊರೆತಿದೆ.
ಈ ಹಿಂದೆ ಅಂದರೆ ಏಪ್ರಿಲ್ 23ರಂದು ಪ್ರಧಾನಿ ಮೋದಿ ಅಹ್ಮದಾಬಾದ್ ನಲ್ಲಿ ನಡೆದಿದ್ದ ರೋಡ್ ಷೋ ಸಂದರ್ಭದ ಭಾಷಣ ಮತ್ತು ಏಪ್ರಿಲ್ 9ರಂದು ಕರ್ನಾಟಕದ ಚಿತ್ರದುರ್ಗದಲ್ಲಿ ನಡೆದಿದ್ದ ಪ್ರಚಾರ ಸಮಾವೇಶದಲ್ಲಿ ಮಾಡಿದ್ದ ಭಾಷಣಗಳಿಗೆ ಸಂಬಂಧಿಸಿದಂತೆ ಮೋದಿ ವಿರುದ್ಧ ದೂರು ದಾಖಲಾಗಿತ್ತು. ಈ ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೋದಿ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ಅಂಶಗಳಲ್ಲಿ ಎಂದು ಹೇಳಿದೆ. ಅಲ್ಲದೆ ಅವರಿಗೆ ಕ್ವೀನ್ ಚಿಟ್ ನೀಡಿದ್ದು, ಎರಡೂ ಪ್ರಕರಣಗಳ ಅರ್ಜಿಯನ್ನು ವಜಾಗೊಳಿಸಿದೆ.
ಅದರೊಂದಿಗೆ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಪೈಕಿ ಒಟ್ಟು 8 ಪ್ರಕರಣಗಳಲ್ಲಿ ಅವರಿಗೆ ಕ್ಲೀನ್ ಚಿಟ್ ದೊರೆತಂತಾಗಿದೆ. ಈ ಹಿಂದೆ ಮಹಾರಾಷ್ಟ್ರದ ಲಾತುರ್ ಜಿಲ್ಲೆಯಲ್ಲಿ ನಡೆದಿದ್ದ ಭಾಷಣದಲ್ಲೂ ಪ್ರಧಾನಿ ಮೋದಿ ಬಾಲಾಕೋಟ್ ವಾಯುದಾಳಿಯನ್ನು ಪ್ರಸ್ತಾಪಿಸಿದ್ದರು. ಈ ಪ್ರಕರಣದಲ್ಲೂ ಈ ಹಿಂದೆ ಮೋದಿಗೆ ಆಯೋಗ ಕ್ಲೀನ್ ಚಿಟ್ ನೀಡಿತ್ತು.
ಅಂತೆಯೇ ಮೋದಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ಪೈಕಿ ಇನ್ನೂ 2 ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ಈ ಪ್ರಕರಣಗಳ ತೀರ್ಪನ್ನು ಆಯೋಗ ಇನ್ನೂ ಬಹಿರಂಗ ಪಡಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiPM Modiಪ್ರಧಾನಿ ಮೋದಿElection Commissionಚುನಾವಣಾ ಆಯೋಗಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


