ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಲ್ಲ: ಮೋದಿ, ಅಮಿತ್ ಶಾ ಗೆ 'ಸುಪ್ರೀಂ' ಕೂಡ ಕ್ಲೀನ್ ಚಿಟ್!
ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಸಲ್ಲಿಸಿದ್ದ...

Published On :
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ತುತ್ತಾಗಿದ್ದ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಚುನಾವಣಾ ಆಯೋಗದ ನಿರ್ಧಾರವನ್ನು ನಾನು ಪ್ರಶ್ನಿಸಲ್ಲ ಎಂದು ಹೇಳಿದೆ.
ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ರಂಜನ್ ಗಗೋಯ್ ಮತ್ತು ದೀಪಕ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿಚಾರಣೆ ಚುನಾವಣಾ ಆಯೋಗದ ಕರ್ತವ್ಯವಾಗಿದ್ದು, ಅದರ ಕೆಲಸದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶ ಮಾಡುವುದಿಲ್ಲ. ಅಂತೆಯೇ ಚುನಾವಣಾ ಆಯೋಗದ ನಿರ್ಧಾರವನ್ನೂ ತಾನು ಪ್ರಶ್ನಿಸುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಇದಕ್ಕೂ ಮೊದಲು ಇದೇ ರೀತಿಯ ಅರ್ಜಿಗಳ ವಿಚಾರಣೆ ನಡೆಸಿದ್ದ ಪೀಠ ಎಲ್ಲ ಅರ್ಜಿಗಳಿಗೆ ಸಂಬಂಧಿಸದಂತೆ ದಾಖಲೆಗಳನ್ನು ಕೋರ್ಟ್ ಗೆ ನೀಡುವಂತೆ ಅರ್ಜಿದಾರರಿಗೆ ಸೂಚಿಸಿತ್ತು. ಈ ವೇಳೆ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವಿ ಪರ ವಕಾಲತ್ತು ವಹಿಸಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಚುನಾವಣಾ ಆಯೋಗ ಸರಿಯಾದ ಸ್ಪಷ್ಟನೆ ನೀಡದಯೇ ಮೋದಿ ಮತ್ತು ಅಮಿತ್ ಶಾ ವಿರುದ್ಧ ದಾಖಲಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸುತ್ತಿದೆ. ಹೀಗಾಗಿ ಈ ಸಂಬಂಧ ಸೂಕ್ತ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್PM Modiಪ್ರಧಾನಿ ಮೋದಿElection Commissionಚುನಾವಣಾ ಆಯೋಗಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


