ಅವಹೇಳನಕಾರಿ ಕರಪತ್ರ: ಆಪ್ ಅಭ್ಯರ್ಥಿ ಆತಿಶಿ ಕಣ್ಣೀರು, ಗೌತಮ್ ಗಂಭೀರ್ ವಿರುದ್ಧ ಆರೋಪ
ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆತಿಶಿ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚಿಕೆಯಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ.

Published On :
ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆತಿಶಿ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚಿಕೆಯಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ.
ಮೇ.09 ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಆತಿಶಿ, ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮ ದೇಶದಲ್ಲಿ ರಾಜಕೀಯ ಅಧಃಪತನಗೊಂಡಿದೆ. ಈ ವಿಷಯವನ್ನು ಮಾಧ್ಯಮಗಳ ಮುಂದೆ ಮಾತನಾಡುವುದಕ್ಕೆ ಬೇಸರವಾಗುತ್ತೆ ಎಂದು ಆತಿಶಿ ಕಣ್ಣೀರಿಟ್ಟಿದ್ದಾರೆ.
ಗೌತಮ್ ಗಂಭೀರ್ ರಾಜಕೀಯಕ್ಕೆ ಸೇರ್ಪಡೆಯಾದಾಗ ನಾನು "ರಾಜಕೀಯದಲ್ಲಿ ಒಳ್ಳೆಯ ವ್ಯಕ್ತಿಗಳು ಅವಶ್ಯಕ ಎಂದು ಹೇಳಿದ್ದೆ. ಆದರೆ ಈಗ ಅವರು ಮತ್ತೆ ಅವರ ಪಕ್ಷ ಯಾವ ಮಟ್ಟಕ್ಕೆ ಬೇಕಾದರೂ ಇಳಿಯಬಹುದೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಆತಿಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಿಳೆಯನ್ನು ಸೋಲಿಸುವುದಕ್ಕೆ ಗಂಭೀರ್ ಈ ಮಟ್ಟಕ್ಕೆ ಇಳಿಯುವುದಾದರೆ ಸಂಸದರಾದ ನಂತರ ಮಹಿಳೆಯರಿಗೆ ಭದ್ರತೆಯನ್ನು ಹೇಗೆ ನೀಡುತ್ತಾರೆ ಎಂದು ಆತಿಶಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಮ್ ಆದ್ಮಿ ಪಕ್ಷGautam Gambhirಗೌತಮ್ ಗಂಭೀರ್Lok Sabha Elections 2019ಲೋಕಸಭಾ ಚುನಾವಣೆ 2019AAP candidate Atishiderogatory pamphletಅವಹೇಳನಕಾರಿ ಕರಪತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


