ಮೋದಿ, ಬಿಜೆಪಿಗೆ ಸೆಡ್ಡು ಹೊಡೆಯಲು ಹಿಂದುತ್ವ, ಕೇಸರಿ ಮೊರೆ ಹೋದ ಕಾಂಗ್ರೆಸ್!
ಹಿಂದುತ್ವವನ್ನೇ ತಮ್ಮ ಟ್ರಂಪ್ ಕಾರ್ಡ್ ಮಾಡಿಕೊಂಡ ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದ ಚುಕ್ಕಾಣಿ ಹಿಡಿದಿದ್ದರಿಂದ ಎಚ್ಚೇತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿಗೆ ಸೆಡ್ಡು...

Published On :
ಹಿಂದುತ್ವವನ್ನೇ ತಮ್ಮ ಟ್ರಂಪ್ ಕಾರ್ಡ್ ಮಾಡಿಕೊಂಡ ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದ ಚುಕ್ಕಾಣಿ ಹಿಡಿದಿದ್ದರಿಂದ ಎಚ್ಚೇತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿಗೆ ಸೆಡ್ಡು ಹೊಡೆಯಲು ಹಿಂದುತ್ವ ಹಾಗೂ ಕೇಸರಿ ಮೊರೆ ಹೋಗುತ್ತಿದೆ.
ಹೌದು, ಮಧ್ಯಪ್ರದೇಶದ ಭೋಪಾಲ್ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಾಧ್ವಿ ಪ್ರಗ್ಯಾ ಸಿಂಗ್ ಸ್ಪರ್ಧಿಸುತ್ತಿದ್ದು ಪ್ರತಿ ಸ್ಪರ್ಧಿಯಾಗಿರುವ ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ಠಾಕೂರ್ ಇದೀಗ ಬಿಜೆಪಿಯನ್ನು ಮಣಿಸಲು ಹಿಂದುತ್ವದ ಮೊರೆ ಹೋಗಿದ್ದು ನಿನ್ನೆ ನಡೆದ ರೋಡ್ ಶೋನಲ್ಲಿ ಎಲ್ಲೆಲ್ಲೂ ಕೇಸರಿ ಬಾವುಟಗಳು ರಾರಾಜಿಸಿದ್ದವು.
ದಿಗ್ವಿಜಯ್ ಸಿಂಗ್ ಅವರ ರೋಡ್ ಶೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದೂ ಮತಗಳನ್ನು ಸೆಳೆಯಲು ಕಾಂಗ್ರೆಸ್ ಕೇಸರಿ ಶಾಲನ್ನು ಹಂಚಿದೆ ಎನ್ನುವ ಆಕ್ರೋಶ ವ್ಯಕ್ತವಾಗಿದೆ.
ಭೋಪಾಲ್ ಲೋಕಸಭೆ ಕ್ಷೇತ್ರಕ್ಕೆ ಮೇ 12ರಂದು ಮತದಾನ ನಡೆಯಲಿದ್ದು ಮೇ 23ರಂದು ಫಲಿತಾಂಶ ಹೊರಬೀಳಲಿದೆ.
ಒಟ್ಟಿನಲ್ಲಿ ಪರಿಸ್ಥಿತಿಗೆ ತಕ್ಕಂತೆ ಬದಲಾಗುವ ಮನಸ್ಥಿತಿಯಲ್ಲಿರುವ ಕಾಂಗ್ರೆಸ್ ಇದೀಗ ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಲು ಮುಂದಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕಾಂಗ್ರೆಸ್ದಿಗ್ವಿಜಯ್ ಸಿಂಗ್Saffronಲೋಕಸಭೆ ಚುನಾವಣೆDigvijaya SinghLok Sabha pollsCongresಕೇಸರಿPragya Sadhviಪ್ರಗ್ಯಾ ಸಾಧ್ವಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


