ದೇಶ

ಬಿಜೆಪಿ ಎಂದಿಗೂ ಮೋದಿ ಅಥವಾ ಅಮಿತ್ ಶಾ ಅವರ ಪಕ್ಷವಾಗಲು ಸಾಧ್ಯವಿಲ್ಲ: ನಿತಿನ್ ಗಡ್ಕರಿ

ಬಿಜೆಪಿ ಎಂದಿಗೂ ಮೋದಿ ಅಥವಾ ಅಮಿತ್ ಶಾ ಅವರ ಪಕ್ಷವಾಗುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬಿಜೆಪಿ ಎಂದಿಗೂ ಮೋದಿ ಅಥವಾ ಅಮಿತ್ ಶಾ ಅವರ ಪಕ್ಷವಾಗಲು ಸಾಧ್ಯವಿಲ್ಲ: ನಿತಿನ್ ಗಡ್ಕರಿ
ಬಿಜೆಪಿ ಎಂದಿಗೂ ಮೋದಿ-ಶಾ ಪಕ್ಷ ಆಗಲು ಸಾಧ್ಯವಿಲ್ಲ: ನಿತಿನ್ ಗಡ್ಕರಿ
Published On :
ನವದೆಹಲಿ: ಬಿಜೆಪಿ ಎಂದಿಗೂ ಮೋದಿ ಅಥವಾ ಅಮಿತ್ ಶಾ ಅವರ ಪಕ್ಷವಾಗುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 
ಬಿಜೆಪಿ ಪಕ್ಷ ಮೋದಿ ಕೇಂದ್ರಿತವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿರುವ ನಿತಿನ್ ಗಡ್ಕರಿ, ಬಿಜೆಪಿ ಸಿದ್ಧಾಂತ ಕೇಂದ್ರಿತ ಪಕ್ಷವೇ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಾಗುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಬಿಜೆಪಿ ಈ ಹಿಂದೆ ಅಟಲ್ ಅಥವಾ ಅಡ್ವಾನಿ ಅವರ ಪಕ್ಷ ಆಗಿರಲಿಲ್ಲ, ಇನ್ನು ಮುಂದೆ ಮೋದಿ-ಅಮಿತ್ ಶಾ ಪಕ್ಷವೂ ಆಗಲ್ಲ. ಬಿಜೆಪಿ ಎಂದಿಗೂ ಸಿದ್ಧಾಂತ ಕೇಂದ್ರಿತ ಪಕ್ಷ ಎಂದು ಗಡ್ಕರಿ ಹೇಳಿದ್ದಾರೆ.
ಇದೇ ವೇಳೆ ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ  ಅತಂತ್ರವಾಗಿರಲಿದೆ ಎಂಬ ವರದಿಗಳನ್ನು ಅಲ್ಲಗಳೆದಿರುವ ನಿತಿನ್ ಗಡ್ಕರಿ, ಕಳೆದ ಬಾರಿಗಿಂತ ಬಿಜೆಪಿ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.